Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಕ್ಷೇತ್ರದಲ್ಲಿ ಒಂದು ಲಕ್ಷ ಮತ ಹಾಕಿಸೋದು ನಮ್ಮ ಗುರಿ

ಮಂಡ್ಯ ಜಿಲ್ಲೆಯ ಏಳು ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಒಂದು ಲಕ್ಷ ಮತಗಳನ್ನು ಹಾಕಿಸೋದು ನಮ್ಮೆಲ್ಲರ ಗುರಿಯಾಗಲಿ ಎಂದು ಬಿಜೆಪಿ ಮುಖಂಡ, ಒಕ್ಕಲಿಗ ಸಂಘದ ನಿರ್ದೇಶಕ ಅಶೋಕ್ ಜಯರಾಮ್ ಗುಡುಗಿದರು.

ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು, ಲಕ್ಷ್ಮಿ ಅಶ್ವಿನ್ ಗೌಡ ರವರು ಬಿಜೆಪಿ ಸೇರಿದ್ದೇವೆ. ನಮ್ಮ ಗುರಿ ಕೇವಲ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವುದಲ್ಲ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಗುರಿಯಾಗಲಿ ಎಂದರು.

ಲಕ್ಷ್ಮಿ ಅಶ್ವಿನ್ ಗೌಡ, ಚಂದಗಾಲು ಶಿವಣ್ಣ, ಸಿದ್ದರಾಮಯ್ಯ ಎಲ್ಲರೂ ಸೇರಿ ಮಂಡ್ಯ ಜಿಲ್ಲೆಯಲ್ಲಿ ಒಂದು ಲಕ್ಷ ಮತಗಳನ್ನು ಪಡೆಯುವ ಗುರಿ ಇಟ್ಟುಕೊಂಡು ಇಂದಿನಿಂದಲೇ ಪಕ್ಷ ಸಂಘಟನೆ ಮಾಡೋಣ ಎಂದರು.

ಇಂದು ಯುವಕರು, ಮಹಿಳೆಯರು, ಸಾಮಾನ್ಯ ಮನುಷ್ಯರು ಕೇಂದ್ರದಲ್ಲಿ ಮೋದಿ ಸರ್ಕಾರವನ್ನು ಮತ್ತು ರಾಜ್ಯದಲ್ಲಿ ಬೊಮ್ಮಾಯಿ ಅವರ ಸರ್ಕಾರವನ್ನು ಒಪ್ಪಿದ್ದಾರೆ.ಕಳೆದ ಚುನಾವಣೆಯಲ್ಲಿ ಕಡೆ ಕ್ಷಣದಲ್ಲಿ ಚಂದಗಾಲು ಶಿವಣ್ಣ ಅವರು ಟಿಕೆಟ್ ಪಡೆದು 32 ಸಾವಿರ ಮತಗಳನ್ನು ಪಡೆದಿದ್ದರು. ಮುಂದಿನ ಚುನಾವಣೆಯಲ್ಲಿ ನಾವೆಲ್ಲರೂ ಸೇರಿ ಒಂದುಲಕ್ಷ ಮತಗಳ ಗುರಿಮುಟ್ಟೋಣ ಎಂದರು.

ಜಿಲ್ಲೆಯಲ್ಲಿ ಆಡಳಿತದಲ್ಲಿ ಯಾವ ಕೊರತೆಯೂ ಇಲ್ಲ. ಆದರೆ ಬಿಜೆಪಿ ಸಂಘಟನೆಯಲ್ಲಿ ಕೊರತೆಯಿದ್ದು, ಎಲ್ಲರೂ ಸೇರಿ ಒಂದಾಗಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರೋಣ ಎಂದು ಮನವಿ ಮಾಡಿದರು.

ಲಕ್ಷ್ಮಿ ಅಶ್ವಿನ್ ಗೌಡ ಮಾತನಾಡಿ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆ ಮಾಡಿ, ಅಭಿವೃದ್ಧಿಯ ಮಂತ್ರ ಪಠಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಹೋರಾಡೋಣ ಎಂದು ಕರೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!