Saturday, October 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಂಟೈನರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ KSRTC ಬಸ್ಸು: ಹಲವರು ಗಾಯ

ಬೆಂಗಳೂರು- ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಯಲ್ಲಿ ಕುಣಿಗಲ್ ನಿಂದ ಬರುತ್ತಿದ್ದ ಬಸ್ಸು ಮಂಡ್ಯ ಹೊರವಲಯದ ಸ್ಯಾಂಜೋ ಆಸ್ಪತ್ರೆ ಬಳಿ ಕಂಟೈನರ್ ಗೆ ಡಿಕ್ಕಿ ಹೊಡೆದು ಪಲ್ಪಿಯಾದ ಪರಿಣಾಮ 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಕುಣಿಗಲ್-ಹೆಬ್ಬೂರು-ತುಮಕೂರು ನಡುವೆ ಸಂಚರಿಸುತ್ತಿದ್ದ ಬಸ್ಸು ಡಿಕ್ಕಿ ಹೊಡೆದ ರಭಸಕ್ಕೆ
ಪಲ್ಟಿ ಹೊಡೆದು ಬಿದ್ದಿದ್ದರಿಂದ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಯಾಂಜೋ ಆಸ್ಪತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!