Friday, September 13, 2024

ಪ್ರಾಯೋಗಿಕ ಆವೃತ್ತಿ

ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಶಿವರಾಮ ಮಲ್ಲಸಂದ್ರ ಆಯ್ಕೆ

ನಾಗಮಂಗಲ ತಾಲೂಕು ಪ್ರಾಥಮಿಕ ಭೂ ಅಭಿವೃದ್ದಿ ಬ್ಯಾಂಕಿನ (ಪಿ ಎಲ್ ಡಿ)ನೂತನ ಉಪಾಧ್ಯಕ್ಷರಾಗಿ ಶಿವರಾಮು ಮಲ್ಲಸಂದ್ರ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಮ್ಮ ಅವರು ರಾಜೀನಾಮೆ ನೀಡಿದ್ದ ಹಿನ್ನಲೆಯಲ್ಲಿ ಇಂದು ಚುನಾವಣೆ ನಡೆಯಿತು. ಮಾಜಿ ಸಚಿವ ಚಲುವರಾಯಸ್ವಾಮಿ ಬೆಂಬಲಿಗ ಶಿವರಾಮು ಮಲ್ಲಸಂದ್ರ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು.

ನೂತನ ಉಪಾಧ್ಯಕ್ಷ ಶಿವರಾಮು ಮಲಸಂದ್ರ ಮಾತನಾಡಿ ನನ್ನ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರಿಗೂ ಹಾಗೂ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಯವರಿಗೆ ಧನ್ಯವಾದ ಅರ್ಪಿಸುತ್ತೇನೆ. ಎಲ್ಲರ ವಿಶ್ವಾಸದೊಂದಿಗೆ ಬ್ಯಾಂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ‌. ನನ್ನ ಅವಧಿಯಲ್ಲಿ ಷೇರುದಾರ ರೈತರಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಿ ಕೊಡುತ್ತೇನೆ. ಜಿಲ್ಲೆಯಲ್ಲಿ ನಾಗಮಂಗಲ ಪಿ ಎಲ್ ಡಿ ಬ್ಯಾಂಕ್ ಪ್ರಥಮ ಸ್ಥಾನದಲ್ಲಿದ್ದು, ಅದೇ ರೀತಿ ಬ್ಯಾಂಕಿನ ಉನ್ನತಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷ ಸಿ.ಜೆ. ಮಂಜುನಾಥ್, ನಿರ್ದೇಶಕರಾದ ತಟ್ಟಹಳ್ಳಿ ನರಸಿಂಹಮೂರ್ತಿ, ಅಲ್ಪಹಳ್ಳಿ ಸತೀಶ್ ಚಂದ್ರ ಹಾಗೂ ಇತರೆ ನಿರ್ದೇಶಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!