ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಆಂಗ್ಲ ಭಾಷೆ ವಿಭಾಗ, ಕನ್ನಡ ವಿಭಾಗ ಮತ್ತು ಚಿತ್ರಕೂಟ ಸಾಂಸ್ಕೃತಿಕ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಾ.25ರಂದು ಮಧ್ಯಾಹ್ನ 12 ಗಂಟೆಗೆ ಪಿ.ಲಂಕೇಶ್ ಸಾಹಿತ್ಯ ಮತ್ತು ಪತ್ರಿಕೋದ್ಯಮ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮವು ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ನಡೆಯಲಿದೆ.
‘ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್’ ಅಧ್ಯಕ್ಷ ವಿನಯ್ ಕುಮಾರ್ ಎಂ. ಸಮಾರಂಭದ ಉದ್ಘಾಟನೆ ನೆರವೇರಿಸುವರು. ನಾವು ದ್ರಾವಿಡ ಕನ್ನಡಿಗರು ಚಳವಳಿಯ ಅಭಿ ಗೌಡ ‘ಪಿ.ಲಂಕೇಶ್ ಮತ್ತು ಸಮಕಾಲೀನ ಪತ್ರಿಕೋದ್ಯಮ’ ಕುರಿತು ವಿಶೇಷ ಉಪನ್ಯಾಸ ನೀಡುವರು.
ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಗುರುರಾಜ ಪ್ರಭು ಅಧ್ಯಕ್ಷತೆ ವಹಿಸುವರು. ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ರಾಜೇಂದ್ರ ಸಿಂಗ್ ಬಾಬು ಪ್ರಾಸ್ತಾವಿಕ ನುಡಿ ನುಡಿಯುವರು. ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವರಾಜು ಹೆಚ್.ಎಸ್., ಕನ್ನಡ ಭಾಷಾ ವಿಭಾಗ ಮುಖ್ಯಸ್ಥ ಡಾ. ಚಂದ್ರಕಾಂತ್ ಕೆ., ಹಾಗೂ ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥ ಡಾ.ಟಿ.ಆರ್. ದೀಪಕ್ ಉಪಸ್ಥಿತರಿರುವರು.
ಕಳೆದ ವರ್ಷವು ಚಿತ್ರಕೂಟ ಸಂಸ್ಥೆಯು ಪಿ.ಲಂಕೇಶ್ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು, ಅದರಂತೆ ಈ ಬಾರಿಯೂ ಕಾರ್ಯಕ್ರಮ ಸಂಘಟಿಸಿರುವುದು ವಿಶೇಷವಾಗಿದೆ.




