Sunday, November 22, 2026

ಪ್ರಾಯೋಗಿಕ ಆವೃತ್ತಿ

ಅಂಕಗಳಿಸುವ ಭರಾಟೆಯಲ್ಲಿ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಬಾರದು – ಶಾಸಕ ಪಿ.ಎಂ. ನರೇಂದ್ರಸ್ವಾಮಿ

ಸ್ಪರ್ಧಾತ್ಮಕ ಯುಗದ ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಂಕ ತೆಗೆಯುವ ಓದಿನ ಭರಟೆಯಲ್ಲಿ ಮಾನಸಿಕ ಕಿನ್ನತೆಗೆ ಒಳಗಾಗಬಾರದು, ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ಕೊಡುತ್ತ ಖಿನ್ನತೆಗೆ ಒಳಗಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ವತಿಯಿಂದ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಳವಳ್ಳಿ ತಾಲ್ಲೂಕು ಜಿಲ್ಲೆಯಲ್ಲಿಯೇ ಪಥಮ ಸ್ಥಾನಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು, ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಶಾಸಕರಾಗಿ ಕೃತಜ್ಞತೆ ಸಲ್ಲಿಸುತ್ತೇನೆಂದರು.

ವಿಧಾನಪರಿಷತ್ ಸದಸ್ಯರಾದ ದಿನೇಶ್‌ಗೂಳಿಗೌಡ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಮಕ್ಕಳು ವಿವಾಹವಾದ ನಂತರ ತಂದೆ ತಾಯಿಗಳನ್ನು ಬಿಟ್ಟು ಮಕ್ಕಳು ಪಟ್ಟಣಕ್ಕೆ ವಲಸೆ ಹೋಗುತ್ತಿರುವುದು ನಿರಂತರವಾಗಿ ನಡೆಯುತ್ತಿದೆ, ಪಠ್ಯ ಪುಸ್ತಕಗಳ ಪರಿಷ್ಕçಣೆ ನಡೆಯುತ್ತಿರುವುದರಿಂದ ಪೋಷಕರು ಮಕ್ಕಳ ಜೊತೆಗೆ ಬದುಕಬೇಕೆನ್ನುವ ಹಿನ್ನೆಲೆಯಲ್ಲಿ ತಂದೆ ತಾಯಿಗಳ ಮಹತ್ವವನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕೋರಿದರು.

ಪಿಯುಸಿಯಲ್ಲಿ ನಿರೀಕ್ಷೆಗೆ ಅನುಗುಣವಾಗಿ ಫಲಿತಾಂಶ ಬರುತ್ತಿಲ್ಲ, ಸರ್ಕಾರ ಇತ್ತ ಕಡೆಗೆ ಗಮನಹರಿಸಿ ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ಆಗತ್ಯ ಮೂಲಭೂತ ಸೌಲಭ್ಯಗಳನ್ನು ಹೊದಗಿಸುವುದರ ಮೂಲಕ ಉತ್ತಮ ಫಲಿತಾಂಶ ಬರುವಂತೆ ಕ್ರಮ ಕೈಗೊಳ್ಳಬೇಕು, ಶಾಸಕರು ಕೂಡ ಸರ್ಕಾರದ ಗಮನ ಸೆಳೆಯಬೇಕೆಂದು ಪಿ.ಎಂ ನರೇಂದ್ರಸ್ವಾಮಿ ಅವರಿಗೆ ಮನವಿ ಮಾಡಿದರು.

ರಾಮಮನೋಹರ ಲೋಹಿಯಾ ವೇದಿಕೆ ಅಧ್ಯಕ್ಷ ದಡದಪುರ ಶಿವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ವತಿಯಿಂದ ಹಿಂದಿನಿಂದಲೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ, ವಿದ್ಯಾರ್ಥಿಗಳಿಗೆ ಓದಿನಲ್ಲಿ ಸ್ಪೂರ್ತಿ ತುಂಬಲು ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ಹಾಗೂ ಲ್ಯಾಪ್‌ಟಾಪ್ ವಿತರಿಸಲು ಕ್ರಮ ಕೈಗೊಳ್ಳಬೇಕು, ಶಿಕ್ಷಣ ರಾಷ್ಟೀಕರಣವಾಗುವುದರ ಮೂಲಕ ಪ್ರತಿಯೊಬ್ಬರು ಒಂದೇ ತರಹದ ಶಿಕ್ಷಣ ಪಡೆಯುವಂತಾಗಬೇಕೆಂದು ಒತ್ತಾಯಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು, ಕರ್ನಾಟಕ ಪ್ರದೇಶ ಕುರುಬರ ಸಂಘದ ಸಂಘದ ಉಪಾಧ್ಯಕ್ಷ ಪುಟ್ಟಬಸವಯ್ಯ, ತಾ.ಪಂ ಮಾಜಿ ಉಪಾಧ್ಯಕ್ಷ ಸಿ. ಮಾಧು, ಜಿಲ್ಲಾಧ್ಯಕ್ಷ ಸುರೇಶ್, ಶಿಕ್ಷಣಾಶಕ್ತ ತಳಗವಾದಿ ಪ್ರಕಾಶ್, ಕಿಚ್ಚ ಸುದೀಪ್ ಸಂಘದ ಅಧ್ಯಕ್ಷ ಶಿವರಾಜ್ , ಮುಖಂಡರಾದ ರಾಜು, ಸಾರಕ್ಕಿ ರಾಜು, ಗುರುಸ್ವಾಮಿ, ಚಂದ್ರಕುಮಾರ್, ಶಿವಮಲ್ಲಯ್ಯ, ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ