Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪಿ.ರಾಜೀವ್ ಕ್ಷಮೆಯಾಚನೆಗೆ ಶೋಷಿತ ಸಮುದಾಯಗಳ ವೇದಿಕೆ ಆಗ್ರಹ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಗ್ಗೆ ಲಘುವಾಗಿ ಮಾತನಾಡಿರುವ ಕುಡಚಿ ಮಾಜಿ ಶಾಸಕ ರಾಜೀವ್ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಅಧ್ಯಕ್ಷ ಸುರೇಶ್ ಕಂಠಿ ಆಗ್ರಹಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ರಾಜೀವ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಅಸಮರ್ಥ ಎಂದು ಹೇಳಿಕೆ ನೀಡಿರುವ ಕ್ರಮ ಖಂಡನೀಯ. ಮೀಸಲಾತಿ ಅಡಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ರಾಜೀವ್ ಸೋತ ನಂತರ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಗೃಹ ಸಚಿವರಾಗಿ ಪರಮೇಶ್ವರ್ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಆದರೆ ಪೊಲೀಸ್ ಅಧಿಕಾರಿಯಾಗಿದ್ದ ರಾಜೀವ್ ಅವರಿಗೆ ಪ್ರಸ್ತುತ ವಿದ್ಯಮಾನಗಳ ಅರಿವು ಇರಬೇಕಾಗಿತ್ತು. ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತದಂತೆ ಕೆಲಸ ಮಾಡುತ್ತಿರುವ ಪರಮೇಶ್ವರ್ ಅವರನ್ನು ಟೀಕಿಸುವ ಯಾವುದೇ ನೈತಿಕತೆ ರಾಜೀವ್ ಅವರಿಲ್ಲ ಎಂದು ತಿರುಗೇಟು ನೀಡಿದರು.

ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ರಾಜೀವ್, ಈಗ ಬಿಜೆಪಿ ನಾಯಕರನ್ನು ಮೆಚ್ಚಿಸಲು ಹಾಗೂ ಪ್ರಚಾರಕ್ಕಾಗಿ ಈ ರೀತಿಯ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ಇಂತಹ ಹೇಳಿಕೆ ನೀಡುವುದನ್ನು ಬಿಟ್ಟು, ಕೂಡಲೇ 24 ಗಂಟೆಯೊಳಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಸೋಮೇಶ್, ಶಂಕರಲಿಂಗೇಗೌಡ, ಸ್ವಾಮಿ, ವಿಜಯ್ ಕುಮಾರ್, ಸಿದ್ದರಾಜು, ಶಿವರಾಜು ಸೇರಿದಂತೆ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!