Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ‘ಕೈ’ ಅಭ್ಯರ್ಥಿ ಗಣಿಗ ರವಿಕುಮಾರ್ ಬಿರುಸಿನ ಪ್ರಚಾರ

ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರಗೋಡು ಸಮೀಪದ ಮಾರಗೌಡನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಣಿಗ ಪಿ.ರವಿಕುಮಾರ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿರುಸಿನ ಪ್ರಚಾರ ನಡೆಸಿದರು.

ಗ್ರಾಮಕ್ಕೆ ಆಗಮಿಸಿದ ರವಿಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ನೂರಾರು ಮಹಿಳೆಯರು ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಂಡರು, ಈ ಸಂದರ್ಭದಲ್ಲಿ ಬಾಲಕಿಯೊಬ್ಬಳು ರವಿಕುಮಾರ್ ಅವರಿಗೆ ಬೆಲ್ಲದ ಆರತಿ ಬೆಳಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪಿ.ರವಿ ಕುಮಾರ್ ಗಣಿಗ ಮಾತನಾಡಿ, ಕಳೆದ ಬಾರಿ ಸೋತಿದ್ದೇನೆ, ಈ ಬಾರಿ ನನ್ನನ್ನು ಗೆಲ್ಲಿಸಿ ಕೊಡಿ, ಆ ಮೂಲಕ ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಗ್ಯಾಸ್ ಸಿಲಿಂಡರ್ ಬೆಲೆ 500ಕ್ಕೆ ಇಳಿಯಲಿದೆ
ರಾಜ್ಯದಲ್ಲಿ ಕಾಂಗ್ರೆಸ್  ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾಸ್ ಬೆಲೆ ಕೇವಲ 500 ರೂಪಾಯಿ ಗೆ ಇಳಿಯಲಿದೆ. ಅಲ್ಲದೇ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಗೃಹಿಣಿಗೆ ₹2000 ರೂ. ಸಹಾಯಧನ, ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್, ಪದವೀಧರ ನಿರುದ್ಯೋಗಿಗಳಿಗೆ ₹ 3,000 ನಿರುದ್ಯೋಗ ಭತ್ಯೆ, ಡಿಪ್ಲಮೋ ಆದವರಿಗೆ ₹1.500 ರೂ. ನಿರುದ್ಯೋಗ ಭತ್ಯೆ ದೊರೆಯಲಿದೆ ಎಂದು ಭರವಸೆ ನೀಡಿದರು. ಗ್ರಾಮದಲ್ಲಿ ನೂರಾರು ಮಂದಿ ಬೈಕ್ ರ್‍ಯಾಲಿ ನಡೆಸಿ, ಕಾಂಗ್ರೆಸ್ ಪರ ಪ್ರಚಾರ ನಡೆಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ