Thursday, November 19, 2026

ಪ್ರಾಯೋಗಿಕ ಆವೃತ್ತಿ

ಜಮ್ಮು-ಕಾಶ್ಮೀರ | ಉಗ್ರರ ದಾಳಿಗೆ ಬಲಿಯಾದ ಕನ್ನಡಿಗರ ಮೃತದೇಹಗಳು ಇಂದು ಸಂಜೆ ಬೆಂಗಳೂರಿಗೆ

ಪಹಲ್ಲಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ.

ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ರಾಜ್ಯಕ್ಕೆ 6E 3103/ 6E 5269/ 6E 7731 ವಿಮಾನದ ಮೂಲಕ ತಲುಪಲಿದೆ. ಉಗ್ರರ ಗುಂಡೇಟಿಗೆ ಬಲಿಯಾದ ಮತ್ತೋರ್ವ ಕರ್ನಾಟಕದ ನಿವಾಸಿ ಭರತ್ ಭೂಷನ್ ಮೃತದೇಹವೂ, 6E 3105/ 6E 5252 ವಿಮಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಮುಂಬೈ ಮೂಲಕ ಬೆಂಗಳೂರಿಗೆ ತಲುಪಲಿದೆ.

ದಾಳಿಯಲ್ಲಿ ಮೃತಪಟ್ಟ ಮಧುಸೂದನ್ ರಾವ್ ಅವರು ಮೂಲತಃ ಅಂಧ್ರದವರಾಗಿದ್ದು ರಾಮಮೂರ್ತಿ ನಗರದಲ್ಲಿ ನೆಲೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮೃತದೇಹ ಮಧ್ಯಾಹ್ನ 3 ಗಂಟೆಗೆ 6E 3105/6E 5015 ವಿಮಾನದಲ್ಲಿ ಮುಂಬೈ ಮೂಲಕ ಚೆನ್ನೈ ತಲುಪಲಿದೆ.

ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿಲು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರ ಪಹಲ್ಲಾಮ್‌ಗೆ ತೆರಳಿದ್ದಾರೆ. ಆಸ್ಪತ್ರೆಗೆ ತೆರಳಿರುವ ಅವರು ಕನ್ನಡಿಗರಿಗನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ