Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಾಕಿಸ್ತಾನ ಬಗ್ಗು ಬಡಿದ ಇಂಗ್ಲೆಂಡ್: ಟಿ-20 ವಿಶ್ವ ಚಾಂಪಿಯನ್

ಬೌಲರ್‌ಗಳ ಶಿಸ್ತುಬದ್ಧ ದಾಳಿ ಹಾಗೂ ಬ್ಯಾಟ್ಸ್‌ಮನ್‌ ಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ತಂಡ ಪಾಕಿಸ್ತಾನವನ್ನು ಬಗ್ಗು ಬಡಿದು ಟಿ-20 ವಿಶ್ವಕಪ್ ಚಾಂಪಿಯನ್ ಆಗಿದೆ.

ಇಂಗ್ಲೆಂಡ್ ಬೌಲರ್‌ಗಳ ಮಾರಕ ದಾಳಿಗೆ ಕಂಗಾಲಾದ
ಪಾಕಿಸ್ತಾನ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 137 ರನ್ ಕಲೆಹಾಕಿತು. 38 ರನ್ ಬಾರಿಸಿದ ಶಾನ್ ಮಸೂದ್, ಪಾಕಿಸ್ತಾನ ಪರ ದಾಖಲಿಸಿದ ಗರಿಷ್ಠ ಸ್ಕೋರ್ ಎನಿಸಿಕೊಂಡಿತು.

ನಂತರ 138 ರನ್ ಗಳ ಬೆನ್ನತ್ತಿದ ಇಂಗ್ಲೆಂಡ್ 19 ಓವರ್ ಗಳಲ್ಲಿ 5ವಿಕೆಟ್ ನಷ್ಟಕ್ಕೆ ಗುರಿ ತಲುಪಿ ವಿಶ್ವ ಚಾಂಪಿಯನ್ ಆಯಿತು.

ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ 52 ರನ್ ಗಳಿಸಿದರು. ಜೋಸ್ ಬಟ್ಲರ್ 26 ರನ್,ಬ್ರೂಕ್ಸ್ 20 ರನ್,ಮೊಯಿನ್ ಅಲಿ 19 ರನ್ ಗಳಿಸಿ ಇಂಗ್ಲೆಂಡ್ ತಂಡ ಚಾಂಪಿಯನ್ ಆಗಲು ಕಾರಣರಾದರು‌. ಪಾಕಿಸ್ತಾನದ ಬೌಲರ್ ರೌಫ್ 2 ವಿಕೆಟ್ ಪಡೆದರು.

ಮೊಹಮ್ಮದ್ ವಾಸೀಂ ಶಾಹೀನ್ ಶಾ ಆಫ್ರಿದಿ, ಶಬಾದ್ ಖಾನ್ ತಲಾ 1 ವಿಕೆಟ್ ಪಡೆದರು.

ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಬ್ಯಾಟಿಂಗ್ ಮಾಡಲಿಳಿದ ಪಾಕಿಸ್ತಾನ ತಂಡವು ಎಚ್ಚರಿಕೆಯ ಆರಂಭ ಪಡೆಯಿತು.

ಮೊದಲ ವಿಕೆಟ್‌ಗೆ ಮೊಹಮ್ಮದ್ ರಿಜ್ವಾನ್ ಹಾಗೂ ಬಾಬರ್ ಅಜಂ 4.2 ಓವರ್‌ಗಳಲ್ಲಿ 29 ರನ್‌ಗಳ ಜತೆಯಾಟವಾಡಿದರು. ವಿಕೆಟ್ ಕೀಪರ್ ಬ್ಯಾಟರ್ ರಿಜ್ವಾನ್ 15 ರನ್ ಬಾರಿಸಿ ಸ್ಯಾಮ್ ಕರನ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಮೊಹಮ್ಮದ್ ಹ್ಯಾರಿಸ್ ಕೇವಲ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇಫ್ತಿಕಾರ್ ಅಹಮದ್ 6 ಎಸೆತಗಳನ್ನು ಎದುರಿಸಿ ಖಾತೆ ತೆರೆಯುವ ಮುನ್ನವೇ ವಿಕೆಟ್ ಒಪ್ಪಿಸಿದರು.

ಒಂದು ಹಂತದಲ್ಲಿ 85 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಪಾಕಿಸ್ತಾನ ತಂಡಕ್ಕೆ 5ನೇ ವಿಕೆಟ್‌ಗೆ ಶಾನ್ ಮಸೂದ್ ಹಾಗೂ ಶಾದಾಬ್ ಖಾನ್ 36 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಶಾನ್ ಮಸೂದ್ 28 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 38 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಇದರ ಬೆನ್ನಲ್ಲೇ ಶಾಬಾದ್ ಖಾನ್ ಅವರೂ ಕೂಡಾ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇಂಗ್ಲೆಂಡ್ ತಂಡದ ಪರ ಸ್ಯಾಮ್ ಕರನ್ 4 ಓವರ್ ಬೌಲಿಂಗ್ ಮಾಡಿ ಕೇವಲ 12 ರನ್ ನೀಡಿ 3 ವಿಕೆಟ್ ಪಡೆದರೆ, ಆದಿಲ್ ರಶೀದ್ ಹಾಗೂ ಕ್ರಿಸ್ ಜೋರ್ಡನ್ ತಲಾ 2 ವಿಕೆಟ್ ಮತ್ತು ಬೆನ್ ಸ್ಟೋಕ್ಸ್ ಒಂದು ವಿಕೆಟ್ ಉರುಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!