Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತರ ಆಯ್ಕೆ

ನಾಗಮಂಗಲ ತಾಲ್ಲೂಕಿನ ಪಾಲಅಗ್ರಹಾರ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತತರು 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತರಾದ ಈರಣ್ಣ ಬಿ, ಉಮೇಶ ಪಿ ಜೆ, ಎಂ ಕೆ ಕೃಷ್ಣೇಗೌಡ, ಹೆಚ್ ಎನ್ ಗಿರೀಶ, ಜಯಮ್ಮ, ಪುಟ್ಟಬೋರಮ್ಮ, ಪ್ರೇಮ, ಎನ್ ಮಂಜುನಾಥ್, ಯಶೋದಮ್ಮ, ಪಿ ಆರ್ ರಮೇಶ್ ಗೆಲ್ಲುವ ಮೂಲಕ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕೈ ಬಲ ಪಡಿಸಿದ್ದಾರೆ.

ಚುನಾವಣೆಯ ಫಲಿತಾಂಶ ಪ್ರಕಟಗೊಂಡು ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಚಲುವರಾಯಸ್ವಾಮಿ ಅವರಿಗೆ ಜೈಕಾರಗಳನ್ನ ಕೂಗಿ ಸಂಭ್ರಮಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ