Monday, November 23, 2026

ಪ್ರಾಯೋಗಿಕ ಆವೃತ್ತಿ

ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ : ಶಾಸಕ ಎಂ.ಶ್ರೀನಿವಾಸ್

ನವ ಕರ್ನಾಟಕ ನಿರ್ಮಾಣಕ್ಕಾಗಿ,ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಜೆಡಿಎಸ್ ವರಿಷ್ಠರಾದ ಎಚ್‌.ಡಿ‌‌.ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದು,ಡಿ.22 ರಂದು ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುವ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ ಕೋರಬೇಕೆಂದು ಶಾಸಕ ಎಂ.ಶ್ರೀನಿವಾಸ್ ಕರೆ ನೀಡಿದರು.

ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಪಂಚರತ್ನ ರಥ ಯಾತ್ರೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು, ಕೃಷಿ ಚೈತನ್ಯ, ವಸತಿ ಆಸರೆ,ಯುವ ನವಮಾರ್ಗ ಮತ್ತು ಮಹಿಳಾ ಸಬಲೀಕರಣ ಎಂಬ ಪಂಚರತ್ನ ಯೋಜನೆಗಳ ಮೂಲಕ ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲು ಕುಮಾರಸ್ವಾಮಿ ಅವರು ಡಿ.22 ರಂದು ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಪಂಚರತ್ನ ರಥಯಾತ್ರೆಗೆ ಎಲ್ಲೆಡೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಅದೇ ರೀತಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲೂ ಅಭೂತಪೂರ್ವ ಸ್ವಾಗತ ನೀಡಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಡಿ.22 ರ ಗುರುವಾರ ಬೆಳಿಗ್ಗೆ 9 ಗಂಟೆಗೆ ತಾಲೂಕಿನ ಹನಕೆರೆ ಗ್ರಾಮದಲ್ಲಿ ಪಂಚರತ್ನ ಯಾತ್ರೆಯನ್ನು ಅಭೂತಪೂರ್ವವಾಗಿ ಸ್ವಾಗತಿಸಲಾಗುವುದು. ಪಂಚರತ್ನ ಯಾತ್ರೆಯು ಬೂದನೂರು, ಶ್ರೀನಿವಾಸಪುರಗೇಟ್,ಅರ್ಕೇಶ್ವರ ದೇವಸ್ಥಾನದ ಮುಖಾಂತರ ಗುತ್ತಲು ರಸ್ತೆ ಸಂಚರಿಸಿ, ಮೈಷುಗರ್ ಫ್ಯಾಕ್ಟರಿ ಸರ್ಕಲ್ ಮುಖಾಂತರ ಮಹಾವೀರ ಸರ್ಕಲ್, ವಿವಿ ರಸ್ತೆ, ಹೊಸಹಳ್ಳಿ ಸರ್ಕಲ್, ನೂರಡಿ ರಸ್ತೆ ಮಾರ್ಗವಾಗಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ, ಜಿಲ್ಲಾ ಕಾರಾಗೃಹದ ಸರ್ಕಲ್, ಮರಿಗೌಡ ಬಡಾವಣೆ ಮುಖಾಂತರ ಎಪಿಎಂಸಿ ಮಾರುಕಟ್ಟೆ ತಲುಪಲಿದೆ.  ಮಧ್ಯಾಹ್ನ 1:30 ಕ್ಕೆ ಕಲ್ಲಹಳ್ಳಿ ಮೂಲಕ ಹೊಳಲು ಸರ್ಕಲ್, ಕಾರಿ ಮನೆ ಗೇಟ್, ಚಿಕ್ಕ ಮಂಡ್ಯ, ಸಾತನೂರು, ಕೊಮ್ಮೇರಹಳ್ಳಿ, ಹೊನಗಾನಹಳ್ಳಿ, ಹುಲಿವಾನ ಕೆರಗೋಡು, ಚಿಕ್ಕಬಳ್ಳಿ, ಹಲ್ಲೇಗೆರೆ, ಚಲ್ಲನಾಯಕನಹಳ್ಳಿ, ಚಂದಗಾಲು ಗ್ರಾಮದಲ್ಲಿ ಸಂಚರಿಸಲಿದೆ.

nudikarnataka.com

ರಾತ್ರಿ 8.30 ಕ್ಕೆ ಬಸರಾಳು ಗ್ರಾಮದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ನಂತರ ತಿರುಮಲಪುರ ಗೇಟ್, ದೊಡ್ಡಗರುಡನ ಹಳ್ಳಿ, ಉಪ್ಪರಕನಹಳ್ಳಿ, ಬಿಳಿದೇಗಲು ಗ್ರಾಮದಲ್ಲಿ ಸಂಚರಿಸಿ ಬಿ.ಹೊಸೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಾಸ್ತವ್ಯ ಹೂಡಲಿದ್ದಾರೆ ಎಂದರು.

ಪಂಚರತ್ನ ರಥ ಯಾತ್ರೆಗೆ ರಾಜ್ಯದಲ್ಲಿ ಉತ್ತಮವಾಗಿ ಪ್ರೋತ್ಸಾಹ ಸಿಕ್ಕಿದೆ. ಇದೇ ರೀತಿಯ ಉತ್ಸಾಹ 2023ರಲ್ಲಿ ಎಚ್. ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕ ಆಗುವವರೆಗೂ ಉತ್ಸಾಹ ಹೀಗೆಯೇ ಇರಲಿ ಎಂದಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ
ಜಿ.ಪಂ.ಮಾಜಿ ಸದಸ್ಯ ಎಚ್.ಎನ್.ಯೋಗೇಶ್ ಮಾತನಾಡಿ, ಪಂಚರತ್ನ ಯೋಜನೆಗಳ ಮೂಲಕ ರಾಜ್ಯದ ಜನರಿಗೆ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಲು ಕುಮಾರಸ್ವಾಮಿ ಅವರು ಹೊರಟಿದ್ದಾರೆ.ಈ ರಥಯಾತ್ರೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಂಡ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ. ಜಿಲ್ಲೆಯ ಏಳಕ್ಕೆ ಏಳು ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದು ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಹಳ್ಳಿಗಾಡಿನ ಜನರೂ ಸೇರಿದಂತೆ ಎಲ್ಲರಿಗೂ ಉಚಿತ ಶಿಕ್ಷಣ, ಆರೋಗ್ಯ,ವಸತಿ ಯೋಜನೆ,ಕೃಷಿಕರಿಗೆ ಸಾಲಮನ್ನಾ,ಯುವಕರಿಗೆ ಉದ್ಯೋಗ ನೀಡುವ ಪಂಚರತ್ನ ಯಾತ್ರೆ ಜಾರಿಯಾದರೆ ರಾಜ್ಯ ಸರ್ವಾಂಗೀಣವಾಗಿ ಅಭಿವೃದ್ಧಿಯಾಗುತ್ತದೆ ಎಂದರು. ಹಾಗಾಗಿ ಎಲ್ಲರೂ ಸೇರಿ ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದರು.

ಇದನ್ನೂ ಓದಿರಿ : ಪಂಚರತ್ನ ಯಾತ್ರೆಗೆ ಆರಂಭಿಕ ವಿಘ್ನ: ಪ್ರಭಾವಿ ಆಕಾಂಕ್ಷಿತನಿಗಿಲ್ಲ ಆಹ್ವಾನ

ಜೆಡಿಎಸ್ ಜಿಲ್ಲಾಧ್ಯಕ್ಚ ಡಿ.ರಮೇಶ್,ನಗರ ಘಟಕದ ಅಧ್ಯಕ್ಷ ಎಸ್.ಪಿ.ಗೌರೀಶ್, ತಾಲೂಕು ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ,ಜೆಡಿಎಸ್ ವಕ್ತಾರ ಮಹಾಲಿಂಗೇಗೌಡ,ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್, ಜೆಡಿಎಸ್ ವೀಕ್ಷಕ ಆರ್. ಲಿಂಗಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಕೆ.ಸ್ವಾಮಿಗೌಡ, ಕಾರ್ಯಧ್ಯಕ್ಷ ಬೂದನೂರು ಸ್ವಾಮಿ, ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸಾತನೂರು ಜಯರಾಮ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಮಹಮ್ಮುದ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಮಂಜುಳಾ ಉದಯ ಶಂಕರ್, ನಗರ ಮಹಿಳಾ ಘಟಕದ ಅಧ್ಯಕ್ಷ ಜಯಶೀಲಮ್ಮ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಿರಣ್ ಕುಮಾರ್, ಸೇರಿದಂತೆ ನಗರಸಭಾ ಸದಸ್ಯರು, ಜೆಡಿಎಸ್ ಮುಖಂಡರು ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ