Friday, November 20, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ | ಪುರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಕಚೇರಿ ಬೀಗ

ಮಂಡ್ಯ ಜಿಲ್ಲೆಯ ವಾಂಡವಪುರ ಪುರಸಭೆ ಆಡಳಿತ ಮಂಡಳಿಯ ಆಡಳಿತಾವಧಿ ಅ.23ಕ್ಕೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಕೊಠಡಿಗಳ ಬಾಗಿಲಿಗೆ ಪುರಸಭೆ ಮುಖ್ಯಾಧಿಕಾರಿ ಬೀಗ ಜಡಿದಿದ್ದಾರೆ.

ಅಧಿಕಾರಿಯ ಈ ಕ್ರಮದ ವಿರುದ್ದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರು ಹೈಕೋರ್ಟ್ ಮೊರೆ ಹೋಗಿದ್ದು, ಇದರ ವಿಚಾರಣೆ ನ.3ರಂದು ನಡೆಯಲಿದೆ.

ಕಳೆದ 2018ರಲ್ಲಿ ಪುರಸಭೆ ಆಡಳಿತ ಮಂಡಳಿಗೆ ಚುನಾವಣೆಗೆ ನಡೆದು 23 ಮಂದಿ ಸದಸ್ಯರು ಆಯ್ಕೆಯಾಗಿದ್ದರು. ಸರ್ಕಾರದ ಪ್ರಾರಂಭದ 2 ವರ್ಷದವರೆಗೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೆ ಮೀಸಲಾತಿ ಪ್ರಕಟಿಸದ ಕಾರಣ ಚುನಾಯಿತ ಸದಸ್ಯರು ಪ್ರಮಾಣ ವಚನ ಸ್ವೀಕರಿಸದೆ ಅಧಿಕಾರದಿಂದ ವಂಚಿತರಾಗಿದ್ದರು. ಹಾಗಾಗಿ ಈ ಅವಧಿಯಲ್ಲಿನ ಅಧಿಕಾರವನ್ನು ಹೆಚ್ಚುವರಿಯಾಗಿ ನೀಡಬೇಕು ಎಂಬುದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರ ವಾದವಾಗಿದೆ.

ಜಿಲ್ಲಾಧಿಕಾರಿಗೆ ಪತ್ರ

‘ಪೌರಡಳಿತ ಕಾಯ್ದೆ ಪ್ರಕಾರ ಪುರಸಭೆ ಆಡಳಿತ ಮಂಡಳಿ ಅಧಿಕಾರಾವಧಿ ಅ.23ಕ್ಕೆ ಮುಕ್ತಾಯಗೊಂಡಿದೆ. ಈ ಸಂಬಂಧ ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಈ ಬಗ್ಗೆ ನಿರ್ದೇಶನ ನೀಡುವಂತೆ ಡಿಸಿಗೆ ಪತ್ರ ಬರೆಯಲಾಗಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾ‌ರ್ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ