ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಪಾಂಡವಪುರ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕು ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕರಿಸಿ ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ತಾಲ್ಲೂಕು ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರನ್ನು ಕಾರಣವಿಲ್ಲದೇ ತಾಲ್ಲೂಕು ಕಚೇರಿಗೆ ಅಲೆದಾಡಿಸುವುದು, ನಿಗದಿತ ಸಮಯಕ್ಕೆ ಅರ್ಜಿ ವಿಲೇವಾರಿ ಮಾಡದೆ ಇರುವುದು ಕಂಡುಬಂದಿಲ್ಲ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ನಂತರ ತಾಲ್ಲೂಕು ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಕಡತ ಹಾಗೂ ವಹಿಗಳನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಪಾಂಡವಪುರ ತಾಲ್ಲೂಕು ತಹಶೀಲ್ದಾರ್ ಉಪಸ್ಥಿತರಿದ್ದರು




