ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಸ್ಥಾನ ರಾಜೀನಾಮೆ ತೆರುವಾದ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. 14 ಮಂದಿ ಸದಸ್ಯರ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀನಿವಾಸ್ ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಗೋಪಿನಾಥ್ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಈ ವೇಳೆ ಗ್ರಾ.ಪಂ ನೂತನ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ನನ್ನ ಆಯ್ಕೆಗೆ ಕಾರಣ ಶಾಸಕ ನರೇಂದ್ರಸ್ವಾಮಿ ಹಾಗೂ ಕಾಂಗ್ರೇಸ್ ಮುಖಂಡರು, ಸದಸ್ಯರುಗಳನ್ನು ಅಭಿನಂದಿಸುತ್ತೇನೆ ಎಂದರು.
ತಾ.ಪಂ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಎಲ್ಲಾ ಸದಸ್ಯರ ಸಹಕಾರದಿಂದ ಶಾಸಕ ನರೇಂದ್ರಸ್ವಾಮಿ ರವರ ಮಾರ್ಗದರ್ಶನದಿಂದ ಆಯ್ಕೆ ಮಾಡಿದ್ದು, ಎಲ್ಲಾ ಸದಸ್ಯರು ಒಗ್ಗೂಡಿಸಿಕೊಂಡು ಪಂಚಾಯಿತಿಯನ್ನು ಅಭಿವೃದ್ಧಿಪಡಿಸುವ ಜೊತೆಗೆ ಸಾರ್ವಜನಿಕ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ತಿಳಿಸಿದರು.
ಈ ವೇಳೆ ಗ್ರಾ.ಪಂ ಉಪಾಧ್ಯಕ್ಷೆ ಮಹದೇವಮ್ಮ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಾದೇಶ್, ಮುಖಂಡರಾದ ರವೀಂದ್ರ ಕುಮಾರ್,ವೆಂಕಟರಾಜು, ಸುರೇಶ್, ಸಿದ್ದರಾಜು, ಕೆಂಚಪ್ಪ ಸೇರಿದಂತೆ ಗ್ರಾಂಪಂ ಸದಸ್ಯರು ಸಿಹಿ ಹಂಚಿ ಅಭಿನಂದಿಸಿದರು.




