Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ಯಾರಾ ಮೆಡಿಕಲ್ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ  NABH ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್‍ಗಳ ಸಹಯೋಗದಲ್ಲಿ ಶೇ.75 ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ವಸತಿ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ಯಾರಾಮೆಡಿಕಲ್ ಡಿಪ್ಲಮೋ ಕೋರ್ಸ್ ಮುಕ್ತಾಯಗೊಳಿಸಿದ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳು ನವೆಂಬರ್ 15 ರೊಳಗಾಗಿ   www.sw.kar.nic.in    ವೆಬ್‍ಸೈಟ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ದೂ.ಸಂ.08232-220772 ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!