Wednesday, November 18, 2026

ಪ್ರಾಯೋಗಿಕ ಆವೃತ್ತಿ

3 ಪ್ಯಾಸೆಂಜರ್ ಅಟೋಗಳನ್ನು ಕದ್ದಿದ್ದ ಕಳ್ಳನ ಬಂಧನ

ಶ್ರೀರಂಗಪಟ್ಟಣ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 3 ಪ್ಯಾಸೆಂಜರ್ ಅಟೋಗಳನ್ನು ಕಳವು ಮಾಡಿದ  ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ನಗರದ ಕೆಸರೆ ಸಮೀಪದ ರಾಜೇಂದ್ರ ನಗರದ ನಿವಾಸಿ ನರಸಿಂಹ (37) ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿಯು ಬೆಂಗಳೂರು ಗೋವಿಂದರಾಜ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಪ್ಯಾಸೆಂಜರ್ ಆಟೋ, ಮೈಸೂರಿನ ಲಷ್ಕರ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಪ್ಯಾಸೆಂಜರ್ ಆಟೋ ಮತ್ತು ಶ್ರೀರಂಗಪಟ್ಟಣ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಆರತಿ ಉಕ್ಕಡ ದೇವಸ್ಥಾನದ ಬಳಿ ಒಂದು ಪ್ಯಾಸೆಂಜರ್ ಆಟೋವನ್ನು ಕಳವು ಮಾಡಿರುವುದಾಗಿ ವಿಚಾರಣೆ ವೇಳೆಯಲ್ಲಿ ಬಾಯ್ಬಿಟ್ಟಿದ್ದಾನೆ.

ಘಟನೆ ವಿವರ 

ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಆರತಿ ಉಕ್ಕಡ ದೇವಸ್ಥಾನದ ಜಾಗದಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಪ್ಯಾಸೆಂಜರ್ ಆಟೋವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಇದೇ ಜನವರಿ 22 ರಂದು ಶ್ರೀರಂಗಪಟ್ಟಣ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಈ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಲು ಶ್ರೀರಂಗಪಟ್ಟಣ ಗ್ರಾಮಾಂತರ ಪೋಲಿಸ್ ಠಾಣಾ ಪಿ. ಎಸ್. ಐ ಮತ್ತು ಸಿಬ್ಬಂದಿಯವರ ತಂಡ ರಚನೆ ಮಾಡಲಾಗಿತ್ತು. ಈ ತಂಡವು ಆರೋಪಿಯನ್ನು ಪತ್ತೆ ಹಚ್ಚಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೋಲಿಸ್ ಠಾಣಾ ಅಧಿಕಾರಿಗಳ ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಮಂಡ್ಯ ಜಿಲ್ಲಾ ಪೊಲೀಸ್ ಆಧೀಕ್ಷರು ಶ್ಲಾಘಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ