Thursday, May 16, 2024

ಪ್ರಾಯೋಗಿಕ ಆವೃತ್ತಿ

ಮಾಸಾಂತ್ಯದೊಳಗೆ ರೈತರಿಗೆ ಬೆಳೆ ವಿಮೆ ಪಾವತಿ: ಸಚಿವ ಚಲುವರಾಯಸ್ವಾಮಿ

ರೈತರ ಹಿತಸಂರಕ್ಷಣೆ ರಾಜ್ಯ ಸರ್ಕಾರ ಮೊದಲ ಆದ್ಯತೆಯಾಗಿದೆ ಈಗಾಗಲೇ ರಾಜ್ಯದಲ್ಲಿ ತೀವ್ರ ಬರದ ಹಿನ್ನಲೆಯಲ್ಲಿ ಈ ಮಾಸಾಂತ್ಯದೊಳಗೆ, ಬೆಳೆ ವಿಮೆ ಹಣ ಪಾವತಿಯಾಗಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬೆಳಗಾವಿ ವಿಧಾನಸಭೆಯಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷ ತೀವ್ರ ಬರ ಕಾಡಿದೆ . ಪ್ರಿವೆಂಟಿವ್ ಸೋಯಿಂಗ್ ಇನ್‌ವೋಕ್ ಹಾಗೂ ಮಿಡ್ ಸೀಜನ್ ಅಡ್ವರ್ಸಿಟಿಯಡಿ ಅಂದಾಜಿಸಲಾದ ಪರಿಹಾರ ಸುಮಾರು 450 ಕೋಟಿ ರೂಪಾಯಿ ಭರಿಸಲಾಗಿದೆ. ಈಗಾಗಲೇ ಬೆಳೆ ಕಟಾವು ಸಮೀಕ್ಷೆ ಸಂಪೂರ್ಣ ಮುಗಿದಿದ್ದು, ಉಳಿದ ರೈತರಿಗೂ ವಿಮೆ ಹಣ ಶೀಘ್ರ ತಲುಪಲಿದೆ ಎಂದು ಮಾಹಿತಿ ನೀಡಿದರು.

ಬೆಳೆ ಕಟಾವು ಸಮೀಕ್ಷೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗ ಸೂಚಿಯನ್ವಯ ಹಿಂದಿನ ಏಳು ಸಾಲುಗಳಲ್ಲಿ ಐದು ವರ್ಷಗಳ ಸರಾಸರಿ ಇಳುವರಿಯನ್ನು ಮಾನದಂಡವನ್ನಾಗಿ ಪರಿಗಣಿಸಲಾಗುತ್ತಿದೆ. ಇದನ್ನು ಬದಲಾಯಿಸುವಂತೆ ರಾಜ್ಯ ಸರ್ಕಾರದಿಂದ ಪತ್ರದ ಮೂಲಕ ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಸಹ ಈ ಮಾರ್ಗಸೂಚಿಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸಮ್ಮತಿಸಿಲ್ಲ ಎಂದು ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಯವರು ಸದನಕ್ಕೆ ಮಾಹಿತಿ ನೀಡಿದರು.

ಆದರೂ ರಾಜ್ಯದ ರೈತರ ಹಿತವನ್ನು ಕಾಯ್ದುಕೊಂಡು, ಯಾವುದೇ ತೊಂದರೆಯಾಗದಂತೆ ವಿಶೇಷ ಗಮನಹರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಅವರು ಈ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದು ಕೃಷಿ ಸಚಿವರು ಹೇಳಿದರು.

ಕೃಷಿ ಭಾಗ್ಯ ಯೋಜನೆ ಚಾಲನೆ

ವಿಧಾನ ಸಭೆಯಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಸಿ.ಎಂ.ಬಾಲಕೃಷ್ಣ ಮನವಿಗೆ ಉತ್ತರಿಸಿದ ಸಚಿವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ, ಕೃಷಿಭಾಗ್ಯ ಯೋಜನೆಗೆ ಮರು ಚಾಲನೆ ನೀಡಲಾಗಿದೆ. ಈಗಾಗಲೆ ಸಚಿವ ಸಂಪುಟದ ಅನುಮೋದನೆ ಪಡೆದು ಮಾರ್ಗಸೂಚಿ ಹೊರಡಿಸಲಾಗಿದೆ ಶೀಘ್ರ ಅನುಷ್ಠಾನ ಗೊಳಿಸಲಾಗುವುದು ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!