ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 20,000 ರೂ ಲಂಚದ ಹಣ ಪಡೆಯುತ್ತಿದ್ದ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸೈಯದ್ ಮುಜಾಕೀರ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಒ ಸೈಯದ್ ಮುಜಾಕೀರ್ ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವ್ಯಕ್ತಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಪಿಡಿಓ ಬೇಡಿಕೆ ಇಟ್ಟಿದ್ದ 50 ಸಾವಿರ ರೂ.ಗಳ ಪೈಕಿ 20,000 ರೂ. ನ್ನು ಮುಂಗಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಇನ್ಸೆಕ್ಟರ್ ಬ್ಯಾಟರಾಯನಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.




