Friday, November 20, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯುಕ್ತ ಬಲೆಗೆ

ವ್ಯಕ್ತಿಯೊಬ್ಬರಿಗೆ ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಮಂಡ್ಯ ಜಿಲ್ಲೆಯ ಮದ್ದೂರಿನ ತಾಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಸಚಿನ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಗ್ಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಪೌತಿ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು, ಈ ಸಂದರ್ಭದಲ್ಲಿ ಪಿಡಿಓ 5000 ರೂ. ಲಂಚದ ಬೇಡಿಕೆ ಇಟ್ಟಿದ್ದರು. ನಂತರ ಶಿವಲಿಂಗಯ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೋಮವಾರ 5,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಪಿಡಿಒ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆನಂತರ ಪಿಡಿಒ ಸಚಿನ್ ನನ್ನು ಲೋಕಾಯುಕ್ತ ಪೊಲೀಸರು  ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಕುಮಾರ್ ಹಾಗೂ ಬ್ಯಾಟರಾಯನಗೌಡರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ