ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ತಯಾರಿ ನಡೆಸಿದ್ದು, ಸದ್ಯದಲ್ಲೇ 150 ಪಿಡಿಓ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 660 ಪಿಡಿಓ ಹುದ್ದೆಗಳು ಖಾಲಿ ಇದ್ದು ಅದರಲ್ಲಿ 150 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ಹಣಕಾಸು ಇಲಾಖೆಯಿಂದ ಅನುಮೋದನೆ ದೊರತಿದ್ದು ಮೀಸಲಾತಿಯ ರೊಸ್ಟರ್ ಅನ್ನು ನಿರ್ಧರಿಸಿ, ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದಿದ್ದಾರೆ.




