Friday, November 20, 2026

ಪ್ರಾಯೋಗಿಕ ಆವೃತ್ತಿ

ಬೆಂ-ಮೈ ಹೆದ್ದಾರಿ| ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ

ಮಂಡ್ಯ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ-275ಯ 5 ಸ್ಥಳಗಳಲ್ಲಿ ITMS ರೆಡಾರ್ ಕ್ಯಾಮರಗಳನ್ನು ಅಳವಡಿಸಲಾಗಿದ್ದು, ಇವುಗಳ ಮೂಲಕ ಸಂಚಾರ ನಿಯಮ ಉಲ್ಲಂಘನೆ ಮಾಡಲಾದ ವಾಹನಗಳನ್ನು ಗುರುತಿಸಿ ದಂಡ ವಿಧಿಸಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್.ಯತೀಶ್ ತಿಳಿಸಿದ್ದಾರೆ.

ಸಂಚಾರಿ ನಿಯಮಗಳ ಉಲ್ಲಂಘನೆ ಕುರಿತಂತೆ ದಾಖಲಾಗುವ ಪ್ರಕರಣಗಳನ್ನು ತಕ್ಷಣವೇ ಸದರಿ ವಾಹನದ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ ಎಂ ಎಸ್ ಮೂಲಕ ಮಾಹಿತಿ ರವಾನೆಯಾಗಲಿದ್ದು, ವಾಹನಗಳ ಮಾಲೀಕರು ಹಾಗೂ ಚಾಲಕರು ಜೂನ್ 1 ರಿಂದ ಸ್ಥಳ ದಂಡ ಪಾವತಿ  ಹಾಗೂ  https://payfine.mchallan.com:7271  ವೆಬ್ ಸೈಟ್ ಮೂಲಕ ದಂಡ ಪಾವತಿ ಮಾಡಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದು, ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಉಲ್ಲಂಘಿಸದೆ, ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ