Thursday, October 24, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು| ಮಳೆ ಅವಾಂತರದಿಂದ ಟ್ರಾಫಿಕ್ ಜಾಮ್‌ ; ಫ್ಲೈಓವರ್ ಮೇಲೆ ವಾಹನ ಬಿಟ್ಟು ಮನೆಗೆ ತೆರಳಿದ ಜನರು !

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅನೇಕ ಟೆಕ್ ವೃತ್ತಿಪರರು ಸೇರಿದಂತೆ ಸಾವಿರಾರು ಪ್ರಯಾಣಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮೇಲ್ಸೇತುವೆ ಮೇಲೆ ಸಿಲುಕಿಕೊಂಡಿದ್ದಾರೆ. ಇದರಿಂದ ಬೇಸತ್ತ ಕೆಲವರು ತಮ್ಮ ವಾಹನಗಳನ್ನು ಅಲ್ಲಿಯೇ ಬಿಟ್ಟು ಮನೆಗೆ ತೆರಳಿದ್ದಾರೆ.

ಜನರು ತಮ್ಮ ವಾಹನಗಳನ್ನು ಬಿಟ್ಟು ಕಾಲ್ನಡಿಗೆಯಲ್ಲಿ ತೆರಳುತ್ತಿರು ವಿಡಿಯೊಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಭಾರಿ ಮಳೆಯಿಂದಾಗಿ ಮೇಲ್ಸೇತುವೆಯ ರೂಪೇನಾ ಅಗ್ರಹಾರದಲ್ಲಿ ಗ್ರಿಡ್ಲಾಕ್ ಹದಗೆಟ್ಟಿದೆ, ತಮಿಳುನಾಡಿನಿಂದ ಬೆಂಗಳೂರಿನ ನಗರ ಕೇಂದ್ರಕ್ಕೆ ಟೆಕ್ ಕಾರಿಡಾರ್ ಅನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದರಿಂದ, ಹೆಚ್ಚಿನ ದಟ್ಟಣೆಯನ್ನು ತಡೆಯಲು ಸಂಚಾರ ಪೊಲೀಸರು ಮೇಲ್ಸೇತುವೆಯ ಒಂದು ಬದಿಯನ್ನು ಅನಿವಾರ್ಯವಾಗಿ ಮುಚ್ಚಿದರು.

“>

 

ಬೆಂಗಳೂರಿನಲ್ಲಿ ಇಂದು ಮುಂಜಾನೆಯ ವೇಳೆಗೆ ಬಹುತೇಕ ಪ್ರದೇಶಗಳಲ್ಲಿ ನೀರು ಕಡಿಮೆಯಾದರೂ ಜಲಾವೃತಗೊಂಡ ಜಾಗಗಳಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದವು. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸೇರಿದಂತೆ ಕೆಲವು ಭಾಗಗಳಲ್ಲಿ ಈಗಲೂ ನೀರು ನಿಂತಿದೆ.

ಫ್ಲೈಓವರ್‌ ಮೇಲೆ ಸಿಲುಕಿ ಹತಾಶೆಗೊಂಡ ಪ್ರಯಾಣಿಕರಿಂದ ಸಾಮಾಜಿಕ ಮಾಧ್ಯಮಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮನೆಯಿಂದ ಕೆಲಸ ಮಾಡುವ ಸರ್ಕಾರದ ಸಲಹೆಯನ್ನು ಕಂಪನಿಗಳು ಏಕೆ ಅನುಸರಿಸುತ್ತಿಲ್ಲ ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ. ಅಕ್ಟೋಬರ್ 23 ರಂದು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಈಗಾಗಲೇ ಖಾಸಗಿ ಕಂಪನಿಗಳಿಗೆ ಸಲಹೆ ನೀಡಿತ್ತು.

1.5 ಗಂಟೆಗಳ ಕಾಲ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಸಿಲುಕಿಕೊಂಡಿದ್ದಾಗಿ ಎಕ್ಸ್‌ನಲ್ಲಿ ಒಬ್ಬರು ಪೋಸ್ಟ್ ಮಾಡಿದ್ದಾರೆ. ಇಷ್ಟೊತ್ತಿಗೆ ನಾನು 30 ಕಿಮೀ ದೂರದಲ್ಲಿರುವ ನನ್ನ ಮನೆಗೆ ತಲುಪಿರಬೇಕಿತ್ತು ಎಂದು ಹೇಳಿದ್ದಾರೆ. ಸಂಜೆ 5:20 ಕ್ಕೆ ಲಾಗ್ ಔಟ್ ಮಾಡಿದರೂ, ನಾನು ಇನ್ನೂ ಸಿಕ್ಕಿಬಿದ್ದಿದ್ದೇನೆ. ದೀರ್ಘ ಕಾಳದ ಕಾಯುವಿಕೆಯಿಂದ ಬೇಸತ್ತ ಹಲವರು ಅನಿವಾರ್ಯವಾಗಿ ವಾಹನ ಬಿಟ್ಟು ನಡೆಯಲು ಪ್ರಾರಂಭಿಸಿದರು ಎಂದು ಹೇಳಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿಯಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸುವುದನ್ನು ತಪ್ಪಿಸಲು ಇನ್ನೊಬ್ಬ ಬಳಕೆದಾರರು ಇತರರಿಗೆ ಎಚ್ಚರಿಕೆ ನೀಡಿದರು. ಏಕೆಂದರೆ ಇದು ದ್ವಿಚಕ್ರ ವಾಹನದಲ್ಲಿ ಸಹ ಸಾಮಾನ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಸಮಯ ತೆಗೆದುಕೊಂಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!