ಜನರ ಸೇವೆ ಮಾಡುವ ಸಲುವಾಗಿ ಶ್ರೀ ಶಂಭು ಸೇವಾ ಟ್ರಸ್ಟ್ ಸ್ಥಾಪನೆ ಮಾಡಲಾಗಿದ್ದು,ಜನರಿಗೆ ಸಹಾಯ ಹಸ್ತ ಚಾಚುವುದೇ ಟ್ರಸ್ಟ್ ಗುರಿ ಎಂದು ಮನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ತಿಳಿಸಿದರು.
ಮಂಡ್ಯ ತಾಲೂಕಿನ ಬಸರಾಳು ಹೋಬಳಿಯ ಕಂಬದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳು ಮತ್ತು ಬಸರಾಳು ಪಂಚಾಯಿತಿಯ ವಿವಿಧ ಗ್ರಾಮಗಳ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶ್ರೀ ಶಂಭು ಸೇವಾ ಟ್ರಸ್ಟ್ ಸ್ಥಾಪನೆ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.ಅದರಂತೆ ಶಾಲಾ ಮಕ್ಕಳಿಗೆ ಸಹಾಯ ಮಾಡುವ ದೃಷ್ಟಿಯಿಂದ ಬ್ಯಾಗ್ ಹಂಚಿಕೆ ಮಾಡಲಾಗಿದೆ ಎಂದರು.
ಬಿ.ಆರ್. ಸುರೇಶ್, ಪುಟ್ಟಸ್ವಾಮಿ, ಬಾಲರಾಜು, ಧರ್ಮ, ಮಾಸ್ತಿಗೌಡ , ರಮೇಶ್ ಹಾಗೂ ಗ್ರಾಮದ ಮುಖಂಡರುಗಳು,ಯುವಕರು ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಉಪಸ್ಥಿತರಿದ್ದರು.