Thursday, September 19, 2024

ಪ್ರಾಯೋಗಿಕ ಆವೃತ್ತಿ

ಮೇಲುಕೋಟೆ| ಎಚ್‌.ಮಲ್ಲಿಗೆರೆಯಲ್ಲಿ ಶಾಸಕರ ಜನಸಂಪರ್ಕ ಸಭೆ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಎಚ್‌.ಮಲ್ಲಿಗೆರೆ ಗ್ರಾಮದಲ್ಲಿ ಜನಸಂಪರ್ಕ ಸಭೆಯನ್ನು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನಡೆಸಿದರು.

ರೈತರು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳ ಕ್ರಮ ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್‌ ಸಮಸ್ಯೆ ಇರುವುದನ್ನು ಬಗೆಹರಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಇಲಾಖೆಯಲ್ಲಿ ಶೇ.80 ರಷ್ಟು ಸಮಸ್ಯೆಗಳು ಹಾಗೆಯೇ ಇವೆ ಎಂಬುದನ್ನು ಸಾರ್ವಜನಿಕರು ದೂರು ಹೇಳಿದ್ದಾರೆ, ಆ ಸಮಸ್ಯೆಗಳನ್ನು ಹದಿನೈದು ದಿನಗಳಲ್ಲಿ ಬಗೆಹರಿಸಬೇಕು. ಕೆಲವು ಗ್ರಾಮೀಣ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪಗಳಿದ್ದು, ಈ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಶಂಭೂನಹಳ್ಳಿ, ಕೋಡಹಳ್ಳಿ ಫಾರಂ, ಸಂಪಹಳ್ಳಿ, ಬೀರಗೌಡನಹಳ್ಳಿ, ಹೊಸಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ಜನಸಂಪರ್ಕ ನಡೆಸಿ, ರೈತರು ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಭೆಯಲ್ಲಿ ತಹಶೀಲ್ದಾರ್‌ ಶಿವಕುಮಾರ ಬಿರಾದಾರ್, ತಾ.ಪಂ.ಇಒ ವೀಣಾ, ಗ್ರಾ.ಪಂ.ಅಧ್ಯಕ್ಷ ಎಂ.ರಮೇಶ್‌, ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ವಿವೇಕ್‌, ಲಕ್ಷ್ಮಮ್ಮ, ಸಂತೋಷ್‌, ವಿನಯ್‌, ಪಿಡಿಒ ಪವಿತ್ರಾ ಸೇರಿದಂತೆ ಗ್ರಾಮಸ್ಥರು ಹಾಗೂ ಮುಖಂಡರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!