Wednesday, April 17, 2024

ಪ್ರಾಯೋಗಿಕ ಆವೃತ್ತಿ

ಗೌಡಳ್ಳಿ ಬಳಿ ಅಂಡರ್ ಪಾಸ್ ಮಾಡುವಂತೆ ಜನರ ಆಗ್ರಹ

ಶ್ರೀರಂಗಪಟ್ಟಣದ ಗೌಡಳ್ಳಿ ಬಳಿ ಅಂಡರ್ ಪಾಸ್ ನಿರ್ಮಿಸುವಂತೆ ವಿವಿಧ ಗ್ರಾಮಗಳ ಜನರು ಇಂದು ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಗೌಡಳ್ಳಿ ಬಳಿ ಅಂಡರ್ ಪಾಸ್ ಮಾಡದಿದ್ದರೆ ಜನರಿಗೆ ತುಂಬಾ ತೊಂದರೆಯಾಗುತ್ತದೆ.ವಿದ್ಯಾರ್ಥಿಗಳು ಸುತ್ತಿ ಬಳಸಿ ಕಾಲೇಜಿಗೆ ಹೋಗಬೇಕಾಗುತ್ತದೆ. ಆದ್ದರಿಂದ ಕೂಡಲೇ ಅಂಡರ್ಪಾಸ್ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಗೌಡಳ್ಳಿ ಬಳಿ ಅಂಡರ್ ಪಾಸ್ ನಿರ್ಮಿಸುವಂತೆ ಈಗಾಗಲೇ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರ ಮುಖಾಂತರ ಮನವಿ ಪತ್ರ ಸಲ್ಲಿಸಲಾಗಿದೆ. ಆದರೂ ಕಾಮಗಾರಿ ಆರಂಭಿಸಿಲ್ಲ.

ಅದರಂತೆ ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತೊಮ್ಮೆ ಮನವಿ ಪತ್ರ ಸಲ್ಲಿಸುತ್ತಿದ್ದೇವೆ ಎಂದು ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ತಿಳಿಸಿದರು.

ಗೌಡಳ್ಳಿ , ಸಬ್ಬನಕುಪ್ಪೆ, ಗಣಂಗೂರು, ಮಲ್ಲೇಗೌಡನಕೊಪ್ಪಲು, ಟಿ ಎಂ ಹೊಸೂರು ಗ್ರಾಮದ ಜನರಿಗೆ ಈ ಅಂಡರ್ ಪಾಸ್ ಏಕೆ ಅನಿವಾರ್ಯವಾಗಿದೆ ಎಂಬ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಮೇಶ್ ಬಾಬು ತಿಳಿಸಿದರು.

ಈ ಸಂದರ್ಭದಲ್ಲಿ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!