Thursday, September 19, 2024

ಪ್ರಾಯೋಗಿಕ ಆವೃತ್ತಿ

ಜನಸಾಮಾನ್ಯರು ಜನತಾದರ್ಶನದ ಸದುಪಯೋಗ ಪಡೆಯಿರಿ: ರವಿಕುಮಾರ್

ಜನರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಕೀಲಾರ ಗ್ರಾಮದಲ್ಲಿ ಇದೇ ಮೊದಲನೇ ಬಾರಿಗೆ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡಂತೆ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲ ಜನರು ಪಡೆದುಕೊಳ್ಳಬೇಕು ಎಂದು ಶಾಸಕ ಪಿ. ರವಿಕುಮಾರ್ ಎಂದರು.

ಮಂಡ್ಯ ತಾಲ್ಲೂಕಿನ ಕೆರಗೋಡು 1 ಮತ್ತು 2 ನೇ ಹೋಬಳಿ ಕೀಲಾರ ಗ್ರಾಮದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ಹಲವಾರು ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಶಂಕರೇಗೌಡ ಬೀದಿಯ ಅಭಿವೃದ್ಧಿಗಾಗಿ 70 ಲಕ್ಷ ರೂ ವೆಚ್ಚವನ್ನು ನೀಡಲಾಗಿದ್ದು, ಶೀಘ್ರದಲ್ಲೇ ಜನಸಾಮಾನ್ಯರು ತಿರುಗಾಡಬಹುದು. ಕಾವೇರಿ ನಿಗಮದಿಂದ 8 ಕೋಟಿ ರೂ ವೆಚ್ಚದಲ್ಲಿ ಸುತ್ತಮುತ್ತಲಿನ ಕೆರೆಕಟ್ಟೆ ಹಾಗೂ ಪಿಕಪ್ ನಾಲೆಗಳ ಅಭಿವೃದ್ಧಿಗೊಳಿಸಲಾಗುವುದು ಎಂದರು.

ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಒಟ್ಟು 1 ಕೋಟಿ ರೂ ಮೊತ್ತದಲ್ಲಿ ಅಭಿವೃದ್ಧಿ ಕಾರ್ಯಗಳು ಟೆಂಡರ್ ಹಂತದಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಕೆರಗೋಡು ಹೋಬಳಿಯನ್ನು ಮುಂದಿನ 4 ವರ್ಷದಲ್ಲಿ ಸಮಗ್ರ ಅಭಿವೃದ್ಧಿಯನ್ನು ಮಾಡಲಾಗುವುದು. ಜೊತೆಗೆ ಭ್ರಷ್ಟಾಚಾರವನ್ನು ನಿರ್ಮೂಲನೆಗೊಳಿಸ ಲಾಗುವುದು ಎಂದರು.

ಜಿಲ್ಲೆಯಲ್ಲಿ ಹೊಸ ಶುಗರ್ ಫ್ಯಾಕ್ಟರಿಯನ್ನು 500 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಲೋಕಸಭಾ ಚುನಾವಣೆ ಮುಗಿದ ನಂತರ ಹೊಸ ಶುಗರ್ ಫ್ಯಾಕ್ಟರಿ ನಿರ್ಮಿಸಲು ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು ಎಂದರು.

ಕಾನೂನಿನ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಪರಿಹರ 

ಜನತಾದರ್ಶನ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿಗಳನ್ನು ಕಾನೂನಿನ ವ್ಯಾಪ್ತಿಯೊಳಗೆ ಪರಿಹರಿಸುವ ವ್ಯವಸ್ಥೆ ಮಾಡಲಾಗಿದ್ದು, ಇದರ ಸದುಪಯೋಗವನ್ನು ಎಲ್ಲಾ ಜನಸಾಮಾನ್ಯರು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಲು ಅಲೆಯುವುದನ್ನು ಹೋಗಲಾಡಿಸುವ ಸಲುವಾಗಿ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಡಳಿತ ವ್ಯವಸ್ಥೆಯ ಸುತ್ತ ಜನರು ಸುತ್ತಬಾರದು, ಜನರ ಸುತ್ತ ಆಡಳಿತ ವ್ಯವಸ್ಥೆ ಇರಬೇಕು ಎಂಬುದು ಜನತಾದರ್ಶನ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ತಹಶೀಲ್ದಾರ್ ಬಿರಾದರ್, ಎ.ಎಸ್.ಪಿ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!