Thursday, November 19, 2026

ಪ್ರಾಯೋಗಿಕ ಆವೃತ್ತಿ

ಸಚಿವ ಚಲುವರಾಯಸ್ವಾಮಿ ಆಪ್ತ ಸಹಾಯಕರಾಗಿ ಶ್ರೀನಿವಾಸಮೂರ್ತಿ ನೇಮಕ

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಆಪ್ತ ಸಹಾಯಕರಾಗಿ ಎಂ.ಆರ್ ಶ್ರೀನಿವಾಸಮೂರ್ತಿ ಅವರನ್ನು ನೇಮಕ ಮಾಡಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಮೂಲತಃ ಮದ್ದೂರು ಶಿಕ್ಷಣಾಧಿಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಆರ್ ಶ್ರೀನಿವಾಸಮೂರ್ತಿ ಅವರು, ಪ್ರಸ್ತುತ ಮಂಡ್ಯ ಜಿಲ್ಲಾ ಪಂಚಾಯಿತಿಯಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಚಿವರ ಕೋರಿಕೆಯನ್ವಯ ಎಂ.ಆರ್ ಶ್ರೀನಿವಾಸಮೂರ್ತಿ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಸಚಿವರ ಆಪ್ತ ಸಹಾಯಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ