Thursday, September 26, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸೆ.28ರಂದು ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ

ಸೆ.28 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ 15ನೇ ಪದವಿ ಪ್ರದಾನ ಸಮಾರಂಭವನ್ನು ಕಾಲೇಜಿನ ಆವರಣದ ಡಾ.ಹೆಚ್ ಡಿ ಚೌಡಯ್ಯ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್ ಎಂ ನಂಜುಂಡಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿ ಇ ಟಿ ಅಧ್ಯಕ್ಷ ವಿಜಯ್ ಆನಂದ್ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪದವಿಯನ್ನು ಪ್ರದಾನ ಮಾಡಲಾಗುವುದು ಎಂದರು.

ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಎನ್ ಬಿ ಎ ,ಆರ್ ಐ ಆರ್ ಎಫ್ ನಲ್ಲಿ ಅತ್ಯುತ್ತಮ ಸ್ಥಾನ ಪಡೆದಿದೆ , ಕಾಲೇಜಿನಲ್ಲಿ 11 ಇನ್ ಇಂಜಿನಿಯರಿಂಗ್ ಕೋರ್ಸುಗಳಿದ್ದು ,ನ್ಯಾಕ್ ನಿಂದ ಎ ಗ್ರೇಡ್ ಪಡೆದಿದೆ ಎಂದರು .

ಪರೀಕ್ಷಾ ನಿಯಂತ್ರಕ ಡಾ.ಕೆ ಜೆ ಮಹೇಂದ್ರಬಾಬು ಮಾತನಾಡಿ, 2023- 24 ರಲ್ಲಿ ಸ್ನಾತಕ ಪದವಿ ಪರೀಕ್ಷೆಗೆ 708 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು 687 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅದೇ ರೀತಿ ಸ್ನಾತಕೋತ್ತರ ಪದವಿ ಪರೀಕ್ಷೆಗೆ 124 ಮಂದಿ ಪಾಲ್ಗೊಂಡಿದ್ದು 112 ಮಂದಿ ತೇರ್ಗಡೆಯಾಗಿದ್ದಾರೆ. ಅವರಿಗೆ ಅಂದು ನಡೆಯುವ ಕಾರ್ಯಕ್ರಮದಲ್ಲಿ ಟ್ರಸ್ಟಿನ ಕಾರ್ಯದರ್ಶಿ ಎಸ್ಎಲ್ ಶಿವಪ್ರಸಾದ್ ಅವರು ಪದವಿ ಪ್ರದಾನ ಮಾಡಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಎಸ್ ವಿನಯ್, ಡೀನ್ ಡಾ.ಬಿ ದಿನೇಶ್ ಪ್ರಭು, ಡಾ. ಗಿರೀಶ್ ಬಾಬು , ಡಾ.ದಿವಾಕರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!