Thursday, November 19, 2026

ಪ್ರಾಯೋಗಿಕ ಆವೃತ್ತಿ

ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶ ಆರಂಭ

ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣ ಸಂಸ್ಥೆಯಲ್ಲಿ(ಸಿಪೆಟ್) ಮೂರು ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕಿ(ತಾಂತ್ರಿಕ) ಭಾರತಿ ಕೆದರ್ತೆ ತಿಳಿಸಿದರು.

ಕೇಂದ್ರ ಸರಕಾರದ ರಸಾಯನ ಪೆಟ್ರೋ ರಸಾಯನ ಮತ್ತು ರಸಗೊಬ್ಬರ ಸಚಿವಾಲಯ, ಕೌಶಲ್ಯ ಮತ್ತು ತಾಂತ್ರಿ ತರಬೇತಿ ಸಂಸ್ಥೆಯ(ಸಿಎಸ್‌ಟಿಎಸ್) ಅನುಮೋದನೆಯೊಂದಿಗೆ ಸಿಪೆಟ್ ಕೋರ್ಸ್ಗಳನ್ನು ನಡೆಸುತ್ತಿದೆ. 60 ಸೀಟುಗಳಿಗೆ ಪ್ರವೇಶಾವಕಾಶವಿದೆ. ಈ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರಿಗೆ ಉದ್ಯೋಗ ಖಚಿತ. ವಿದೇಶಗಳಲ್ಲೂ ಉದ್ಯೋಗಾವಕಾಶವಿದೆ. ಉನ್ನತ ವ್ಯಾಸಂಗ ಮತ್ತು ಕೈಗಾರಿಕೆ ಸ್ಥಾಪನೆಗೂ ಅವಕಾಶವಿದೆ ಎಂದು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಹೇಳಿದರು.

ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವವರು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ(ಡಿಪಿಎಂಟಿ) ಕೋರ್ಸ್ ಗೆ ಪ್ರವೇಶ ಪಡೆಯಬಹುದು. ದ್ವಿತೀಯ ಪಿಯುಸಿ ಪಾಸ್ ಆದವರು ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ(ಡಿಪಿಟಿ) ಕೋರ್ಸ್ ಮಾಡಬಹುದು. ಇದಲ್ಲದೆ ಬಿಎಸ್ಸಿ ಪದವೀಧರರು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಪ್ರೊಸೆಸಿಂಗ್ ಅಂಡ್ ಟೆಸ್ಟಿಂಗ್ ಸ್ನಾತಕೋತ್ತರ ಕೋರ್ಸ್ ಮಾಡಬಹುದು ಎಂದರು.

ಪ್ರಸ್ತುತ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಬಹಳ ಬೇಡಿಕೆಯಿದೆ. ಪ್ರತಿನಿತ್ಯ ಒಬ್ಬ ಮನುಷ್ಯ ನಾನಾ ರೀತಿಯಲ್ಲಿ 15 ಕೆ.ಜಿ. ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಮುಂದಿನ ಹತ್ತು ವರ್ಷಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಪ್ರಮಾಣ 30 ಕೆ.ಜಿ ತಲುಪುವ ಸಾಧ್ಯತೆಯಿದೆ. ಹೀಗಾಗಿ ಪ್ಲಾಸ್ಟಿಕ್ ಟೆಕ್ನಾಲಜಿಗೆ ಹೆಚ್ಚು ಬೇಡಿಕೆಯಿದೆ ಎಂದು ವಿವರಿಸಿದರು.

ಸಿಪೆಟ್‌ನಲ್ಲಿ ನಾನಾ ಕೋರ್ಸ್ ಗಳಿಗೆ ಸೇರುವವರಿಗೆ ವಿದ್ಯಾರ್ಥಿವೇತನ, ಶೈಕ್ಷಣಿಕ ಸಾಲಸೌಲಭ್ಯ, ಹಾಸ್ಟೆಲ್ ಸೌಲಭ್ಯ ದೊರೆಯಲಿದೆ. ಸ್ಟೈಂಫಂಡ್‌ನೊಂದಿಗೆ ಇಂಟರ್ನ್ಶಿಫ್ ಮಾಡಬಹುದು. ಕ್ಯಾಂಪಸ್‌ನಲ್ಲಿ ಉಚಿತ ವೈ-ಫೈ ಮತ್ತು ವಿದ್ಯಾರ್ಥಿಗಳ ಕ್ಲಬ್ ಸೌಲಭ್ಯವಿದೆ. ಸಿಪೆಟ್ ಪ್ರವೇಶಾತಿ ಪರೀಕ್ಷೆ ಅರ್ಜಿ ಸಲ್ಲಿಸಲು ಮೇ 28 ಕಡೆಯ ದಿನ. ಜೂ.11ರಂದು ಪರೀಕ್ಷೆ ನಡೆಯಲಿದೆ. ಆಗಸ್ಟ್ ಮೊದಲ ವಾರದಲ್ಲಿ ತರಗತಿಗಳು ಆರಂಭವಾಗಲಿವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಸಿಪೆಟ್‌ನ ವ್ಯವಸ್ಥಾಪಕರ ಸಹಾಯಕ ಬಿ.ರಾಚಯ್ಯ, ಕರುನಾಡ ಸೇವಕರು ಸಂಘಟನೆಯ ಪದಾಧಿಕಾರಿಗಳಾದ ಎಂ.ಬಿ.ನಾಗಣ್ಣಗೌಡ, ಚಂದ್ರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ