ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ ಎರಡು ರೂಪಾಯಿ ಹೆಚ್ಚಿಸಿದೆ ಎಂದು ಹಣಕಾಸು ಸಚಿವಾಲಯದ ಸುತ್ತೋಲೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
ಬೆಲೆ ಏರಿಕೆಯು ಏಪ್ರಿಲ್ 8ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಇತ್ತೀಚಿಗಷ್ಟೇ ರಾಜ್ಯದಲ್ಲಿ ಡಿಸೇಲ್ ಬೆಲೆಯನ್ನು ಎರಡು ರೂಪಾಯಿ ಏರಿಸಲಾಗಿದೆ.
ಇದರಿಂದಾಗಿ ಈಗಾಗಲೇ ದೇಶದಾದ್ಯಂತ ದುಬಾರಿಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಈ ಬೆನ್ನಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಾಗದು ಎಂದು ಕೇಂದ್ರ ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. “ಇಂದು ಅಬಕಾರಿ ಸುಂಕ ದರ ಹೆಚ್ಚಳವಾಗಿದೆ. ಈ ಹಿನ್ನೆಲೆಯಿಂದ ಪೆಟ್ರೋಲ್ ಮತ್ತು ಡಿಸೇಲ್ ರಿಟೇಲ್ ಬೆಲೆಯಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ ಎಂದು ತೈಲ ಮಾರುಕಟ್ಟೆ ಸಂಸ್ಥೆಗಳು ತಿಳಿಸಿವೆ” ಎಂದು ಸಚಿವಾಲಯ ಹೇಳಿದೆ.




