Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಿ.ಎಚ್.ಡಿ. ಪ್ರವೇಶಕ್ಕೂ ಸಿಇಟಿ| ಪ್ರೊ.ಎಂ.ಎಸ್.ಸುಭಾಷ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ – ಸುಧಾಕರ್

ಉನ್ನತ ಶಿಕ್ಷಣ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಪಿ.ಎಚ್.ಡಿ. ಅಧ್ಯಯನಕ್ಕೆ ಸಿಇಟಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಪಿ.ಎಚ್.ಡಿ. ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆ ತರುವಲ್ಲಿ ಕ್ರಮಕೈಗೊಳ್ಳಬೇಕಾದ ವಿಧಿ-ವಿಧಾನ ಬಗ್ಗೆ ವಿಸ್ತೃತ ವರದಿ ಪಡೆಯುವ ಸಂಬಂಧ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಸುಭಾಷ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆ

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗಿರುವ ಅತಿಥಿ ಶಿಕ್ಷಕರುಗಳ ಗೌರವ ಸಂಭಾವನೆಯನ್ನು ಸೂಕ್ತವಾಗಿ ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪ್ರಸ್ತುತ, ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ ಪಾವತಿಸುತ್ತಿರುವ ಗೌರವ ಸಂಭಾವನೆ ತೀರಾ ಕಡಿಮೆಯಿದ್ದು ಪರಿಷ್ಕರಿಸಬೇಕು ಎಂದು ಶಾಸಕ ಮಧು ಜಿ.ಮಾದೇಗೌಡರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 34174 ಅತಿಥಿ ಶಿಕ್ಷಕರನ್ನು ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ 7808 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಾಹೆಯಾನ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ರೂ. 10,000/- ಹಾಗೂ ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ರೂ. 10,500/- ಗೌರವ ಸಂಭಾವನೆಯನ್ನು ಪಾವತಿಸಲಾಗುತ್ತಿದೆ. ಈ ಮೊತ್ತವನ್ನು ಪರಿಷ್ಕರಿಸುವ ಸಂಬಂಧ ಆರ್ಥಿಕ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ.

ತಜ್ಞರ ಸಮಿತಿಯು ಸಲ್ಲಿಸುವ ವರದಿಯಲ್ಲಿನ ಶಿಫಾರಸುಗಳ ಆಧಾರದ ಮೇಲೆ ನಿಯಮಾನುಸಾರ ಪರಿಶೀಲಿಸಿ ಸರ್ಕಾರದ ಮೀಸಲಾತಿ ನಿಯಮದನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ ಪಿ.ಎಚ್.ಡಿ, ಪ್ರವೇಶಕ್ಕೆ ಪ್ರತಿ ವಿಶ್ವವಿದ್ಯಾಲಯದಲ್ಲೂ ಆಯಾಯ ವಿಭಾಗಗಳಲ್ಲಿ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ವಿವಿಗಳು ಪ್ರತ್ಯೇಕವಾಗಿ ಪರೀಕ್ಷೆ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!