Thursday, September 19, 2024

ಪ್ರಾಯೋಗಿಕ ಆವೃತ್ತಿ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.

ಮದ್ದೂರು ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಸ್ವತಂತ್ರ ಪದವಿ ಪೂರ್ವ ಕಾಲೇಜು, ಭಾರತಿನಗರ ಸಂಯುಕ್ತ ಆಶ್ರಯದಲ್ಲಿ ಜರುಗಿದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಪೂರ್ಣ ಜೀವನ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಹಿಂಜರಿಕೆ, ಉದಾಸೀನ, ಬೇಜವಾಬ್ದಾರಿತನವನ್ನು ಬದಿಗೊತ್ತಿ ಕ್ರೀಡಾ ಸ್ಪೂರ್ತಿಯಿಂದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉನ್ನತ ಸಾಧನೆ ಮಾಡಬೇಕೆಂದರು.

ಗ್ರಾಮೀಣ ಭಾಗದಲ್ಲಿ ಎಲೆಮರೆ ಕಾಯಿಯಂತಿರುವ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜೊತೆಗೆ ಬೆನ್ನು ತಟ್ಟುವ ಕಾರ್ಯಕ್ಕೆ ಶಿಕ್ಷಕರು ಮುಂದಾಗಬೇಕು. ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ಒದಗಿಸಿದ್ದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕೀರ್ತಿ ತರಲಿದ್ದಾರೆ ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಮಂಜುನಾಥ್ ಮಾತನಾಡಿ, ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕೆಂದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ, ಪ್ರಾಂಶುಪಾಲ ಬೈರೇಶ್, ಗೀತಾ ನಟರಾಜು ಆನಂದ, ಶಿವರಾಜು, ಅಂಕೇಗೌಡ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!