Sunday, November 22, 2026

ಪ್ರಾಯೋಗಿಕ ಆವೃತ್ತಿ

ಏರ್ ಇಂಡಿಯಾ ವಿಮಾನ ಪತನ : ವಿಮಾನದಲ್ಲಿದ್ದ 242 ಜನರು ದುರಂತ ಅಂತ್ಯ

ಗುಜರಾತ್ ರಾಜ್ಯದ ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಪತನದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 242 ಜನರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ. ಈ ಮೂಲಕ ವಿಮಾನ ಪತನದಲ್ಲಿ ಮೃತಪಟ್ಟ ಎರಡನೇ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯಾಗಿದ್ದಾರೆ.

2009ರ ಸೆಪ್ಟೆಂಬರ್​ 2ರಂದು ಬೆಲ್​ 430 ಹೆಲಿಕಾಪ್ಟರ್​ ಪತನವಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ
ವೈ. ಎಸ್​ ರಾಜಶೇಖರ್​ ರೆಡ್ಡಿ ಮೃತಪಟ್ಟಿದ್ದರು. ಗುರುವಾರ (ಜೂ.12) ಅಹಮದಾಬಾದ್​ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್​ ಇಂಡಿಯಾ ವಿಮಾನ ಟೇಕ್​ ಆಫ್​ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ.

ಮಾಜಿ ಸಿಎಂ ವಿಜಯ್​ ರೂಪಾನಿಯವರು ತಮ್ಮ ಮಗಳನ್ನು ಭೇಟಿ ಮಾಡಲು ಇದೇ ವಿಮಾನದಲ್ಲಿ ಲಂಡನ್​ಗೆ ತೆರಳುತ್ತಿದ್ದರು. ದುರಾದೃಷ್ಟವಶಾತ್​ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ವಿಜಯ್​ ರೂಪಾನಿಯವರು ಗುಜರಾತ್​ನ 16ನೇ ಮುಖ್ಯಮಂತ್ರಿಯಾಗಿದ್ದರು.

ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಜೆ ವಿಮಾನದಲ್ಲಿದ್ದರು. ಸಂಜೆ ನಂತರ, ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದರು.

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಘಟನೆ “ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ” ಎಂದು ಹೇಳಿದರು. ವಿಮಾನ ಟೇಕ್ ಆಫ್‌ಗೆ ಅನುಮತಿ ಪಡೆದ ಸುಮಾರು ಒಂಬತ್ತು ನಿಮಿಷಗಳ ನಂತರ ಅಪಘಾತ ಸಂಭವಿಸಿದೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಏರ್ ಇಂಡಿಯಾ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ನಾವು ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಸಾಧ್ಯವಾದಷ್ಟು ಬೇಗ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ. ಇದಕ್ಕಾಗಿ ಏರ್ ಇಂಡಿಯಾವು 1800 5691 444 ಎಂಬ ಮೀಸಲಾದ ಪ್ರಯಾಣಿಕರ ಹಾಟ್‌ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದೆ.

ಕೃಪೆ ;ನಾನು ಗೌರಿ.ಕಾಂ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ