Saturday, November 21, 2026

ಪ್ರಾಯೋಗಿಕ ಆವೃತ್ತಿ

ಸಸ್ಯ ಸಂಪತ್ತು ವೃದ್ದಿಗೆ ಕೈಜೋಡಿಸಿ

ಮುಂದಿನ ಪೀಳಿಗೆಯ ಸಂರಕ್ಷಣೆಗಾಗಿ ಸಸ್ಯ ಸಂಪತ್ತು ವೃದ್ದಿಗೆ ಎಲ್ಲರೂ ಕೈಜೊಡಿಸೋಣ ಎಂದು ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಎಂ.ಬಿ.ರಮೇಶ್ ವಿಶ್ವಕರ್ಮ ಹೇಳಿದರು.

ಮಂಡ್ಯ ನಗರದ ಶ್ರೀಕೆಂಪೇಗೌಡ ಉದ್ಯಾನವನದಲ್ಲಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಿದ್ದ ಸೇವಾ ಪಾಕ್ಷಿಕ ಅಭಿಯಾನ ನಿಮಿತ್ತ ಸಸ್ಯೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರದಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ, ದಿವ್ಯಾಂಗರಿಗೆ ಕೃತಕ ಅಂಗ ಅಥವಾ ಉಪಕರಣಗಳ ವಿತರಣೆ, ವನಮಹೋತ್ಸವ, ಎರಡು ದಿನಗಳ ಸ್ವಚ್ಛತಾ ಅಭಿಯಾನ, ನೀರಿನ ಸಂರಕ್ಷಣೆಯ ಜಾಗೃತಿ ಅಭಿಯಾನ ಸಾಗುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿವೇಕ್, ನಗರಸಭಾ ಸದಸ್ಯ ಶಿವಕುಮಾರ್‌ ಕೆಂಪಯ್ಯ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ