Thursday, November 19, 2026

ಪ್ರಾಯೋಗಿಕ ಆವೃತ್ತಿ

ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ

ಪಾಂಡವಪುರ ತಾಲ್ಲೂಕಿನ ಕೆ. ಬೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪದವಿ ಪೂರ್ವ ಮತ್ತು ಫ್ರೌಡಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಸೇವಾ ಆಂದೋಲನದ ಪ್ರಯುಕ್ತ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಹಾಗೂ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ಮಾಹಿತಿ ನೀಡಲಾಯಿತು.

ಸಮಾಲೋಚಕ ತಮ್ಮಣ್ಣ ಮಾತನಾಡಿ, ಘನ ಮತ್ತು ದ್ರವ ತ್ಯಾಜ್ಯವನ್ನು ಯಾವ ರೀತಿಯಲ್ಲಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಯಾವ ರೀತಿಯ ದುಷ್ಪರಿಣಾಮಗಳು ಉಂಟಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿದರು.

ಸ್ವಚ್ಛತಾ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಉಪನ್ಯಾಸ ನೀಡಿ ಸಾರ್ವಜನಿಕ ಸ್ಥಳಗಳು, ಮನೆ ಹಾಗೂ ನಮ್ಮ ಸುತ್ತಮುತ್ತಲ ಪ್ರದೇಶಗಳನ್ನು ಯಾವಾಗಲೂ ಸ್ವಚ್ಛತೆಯಿಂದ ಇಟ್ಟುಕೊಳ್ಳುವ ಜೊತೆಗೆ ವೈಯಕ್ತಿಕ ಶುಚಿತ್ವವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ನಂತರ ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಸ್ವಚ್ಛತಾ ಶ್ರಮದಾನ, ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಹಾಗೂ ಜಾಥಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿ.ಪಂ. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಸಮಾಲೋಚಕ ಶಿವಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾಲೇಜಿನ ಸಿಬ್ಬಂದಿಗಳು, ಶಿಕ್ಷಕರು, ಪಂಚಾಯಿತಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ