Friday, November 20, 2026

ಪ್ರಾಯೋಗಿಕ ಆವೃತ್ತಿ

ಕೃಷಿ ಚಟುವಟಿಕೆಗಳ ಕುರಿತ ವಿಚಾರ ಸಂಕಿರಣ : ಪಿ.ಎಂ.ನರೇಂದ್ರಸ್ವಾಮಿ

ಮಂಡ್ಯ ಜಿಲ್ಲೆಯ ರೈತರ ಬದುಕು ಹಸನಾಗುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳ ಭವಿಷ್ಯದ ಕುರಿತು ವಿಚಾರ ಸಂಕಿರಣ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಮಂಡ್ಯ ನಗರದ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆ ಕೃಷಿ ಆಧಾರಿತ ಪ್ರದೇಶವಾಗಿದ್ದು, ಈ ಪ್ರದೇಶದ ನೀರಾವರಿ ಹಾಗೂ ಭೂಮಿಯ ಫಲವತ್ತತೆಯನ್ನು ವೃದ್ಧಿಸಿ ಕೃಷಿ ಸಂಸ್ಕರಿತ ಉತ್ಪನ್ನಗಳಿಗೆ ಆದ್ಯತೆ ನೀಡುವ ಮೂಲಕ ರೈತನ ಆರ್ಥಿಕ ಸ್ಥಿತಿಗತಿ ಉನ್ನತೀಕರಿಸಲು ಪ್ರಯತ್ನಿಸಲಾಗುವುದೆಂದರು.

ಮಂಡ್ಯ ಜಿಲ್ಲೆಯಲ್ಲಿ ಸಣ್ಣ ಭೂ ಹಿಡುವಳಿದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ.ಈ ಭಾಗದಲ್ಲಿ ಸಣ್ಣ ಹಿಡುವಳಿದಾರರ ಬದುಕು ಉಜ್ವಲಗೊಳಿಸುವ ಹಿನ್ನೆಲೆಯಲ್ಲಿ ವಿಚಾರ ಸಂಕಿರಣ ನಡೆಸಲಾಗುವುದು.ಇಲ್ಲಿ ಪರಿಣಿತರ ಅಭಿಪ್ರಾಯ ಪಡೆದು ಅದನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಲು ರೈತರ ಮನ ಒಲಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕನ್ನಂಬಾಡಿ ನೀರಿನಿಂದ ಕಬ್ಬು ಮತ್ತು ಭತ್ತದ ಬೆಳೆ ಬೆಳೆದು ಭೂಮಿ ಸವಕಳಿಯಾಗಿದೆ. ಕೃಷಿಗೆ ಕೊಟ್ಟಿಗೆ ಗೊಬ್ಬರ ಬಳಸುವ ಬದಲು ರಾಸಾಯನಿಕ ಗೊಬ್ಬರ ಬಳಸಿ ಭೂಮಿ ಫಲವತ್ತತೆ ನಾಶವಾಗಿದೆ. ಇಂತಹ ಕೃಷಿಯಿಂದ ರೈತರಿಗೆ ಸಂಕಷ್ಟ ಎದುರಾಗಿದ್ದು, ಬದಲಿ ಬೆಳೆಗಳತ್ತ ಗಮನ ಹರಿಸುವ ಮೂಲಕ ರೈತರು ಪರ್ಯಾಯ ಮಾರ್ಗದಲ್ಲಿ ಸಾಗಿ ಅಭಿವೃದ್ಧಿ ಹೊಂದಬೇಕೆಂದು ತಿಳಿಸಿದರು.

ರಾಜ್ಯ ಹಾಗೂ ಜಿಲ್ಲೆಯ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ ಪರಿಣಾಮ ಪಕ್ಷ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಈಡೇರಿಸಲು ಬದ್ಧರಾಗುತ್ತೇವೆ, ಪಕ್ಷದ ವರಿಷ್ಟರು ಹಾಗೂ ಮುಖ್ಯಮಂತ್ರಿಗಳ ಕಾಳಜಿಯಿಂದ ಈಗಾಗಲೇ ಶಕ್ತಿ ಯೋಜನೆ ಜಾರಿಗೊಂಡಿದ್ದು, ಸದ್ಯದಲ್ಲೇ ಗೃಹ ಲಕ್ಷ್ಮಿ ಹಾಗೂ ಪಡಿತರ ವಿತರಣೆಯ ಯೋಜನೆಗಳನ್ನು ಸಾಕಾರಗೊಳಿಸಲು ಸರ್ಕಾರ ಮುಂದಾಗಲಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎ.ಬಿ.ರಮೇಶ್ ಬಾಬು, ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಕೆ.ಸಿ.ಜೋಗಿಗೌಡ, ನಿರ್ದೇಶಕ ಹಾಲಹಳ್ಳಿ ಅಶೋಕ್, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ