Tuesday, May 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ : ಪಿ.ಎಂ ನರೇಂದ್ರಸ್ವಾಮಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ 5ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ಭವಿಷ್ಯ ನುಡಿದರು.

ಮಳವಳ್ಳಿ ಪಟ್ಟಣದ ರೈತ ಸಮುದಾಯ ಭವನದಲ್ಲಿ ಪ್ರಜಾಧ್ವನಿಯಾತ್ರೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ ಎನ್ನುವುದನ್ನು ಮಳವಳ್ಳಿಯಿಂದಲೇ ಛಿದ್ರ ಮಾಡಲು ಆರಂಭಿಸಬೇಕಿದ್ದು, ಮಳವಳ್ಳಿಯಲ್ಲಿ ಫೆ.11ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರಜಾಧ್ವನಿಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.

ಪ್ರಜಾಧ್ವನಿಯಾತ್ರೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಣ್ಣ ತಮ್ಮಂದಿರಂತೆ ಪಕ್ಷ ಸಂಘಟಿಸಿಲು ರಾಜ್ಯಾದ್ಯಂತ ಪ್ರಜಾಧ್ವನಿಯಾತ್ರೆಯನ್ನು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಹಲವು ಕಾರ್ಯಕ್ರಮದಿಂದಲೂ ಮಳವಳ್ಳಿಯಿಂದಲೇ ಹೆಚ್ಚು ಮಂದಿ ಭಾಗವಹಿಸಿರುವುದು ಹೆಮ್ಮೆಯ ವಿಷಯವಾಗಿದೆ, ಕಾರ್ಯಕರ್ತರೇ ನನಗೆ ಶಕ್ತಿಯಾಗಿದ್ದಾರೆ, ಮಳವಳ್ಳಿಯಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆಗೆ ಹಿಂದೆಯೂ ಸೇರಿರದ ರೀತಿಯಲ್ಲಿ ಹಾಗೂ ಮುಂದೆಯೂ ನಡೆಯಲು ಸಾಧ್ಯವಾಗದ ರೀತಿಯಲ್ಲಿ ಅತಿ ಹೆಚ್ಚು ಮಂದಿ ಭಾಗವಹಿಸುವುದರ ಮೂಲಕ ಮಳವಳ್ಳಿಯಿಂದಲೇ ಗೆಲ್ಲುವಿನ ಕೂಗು ಎದ್ದೇಳಬೇಕೆಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಪಕ್ಷದ ಕಾರ್ಯಕ್ರಮಕ್ಕೆ ಮೊಟ್ಟ ಮೊದಲ ಭಾರಿಗೆ ಡಿಕೆ ಶಿವಕುಮಾರ್ ಹಲಗೂರಿನ ಮೂಲಕ ತಾಲ್ಲೂಕಿಗೆ ಆಗಮಿಸುತ್ತಿದ್ದಾರೆ, ಹಲಗೂರಿನಿಂದ ಮಳವಳ್ಳಿ ತನಕ ಯಾತ್ರೆಯನ್ನು ನಡೆಸಲು ಸಿದ್ದತೆ ನಡೆಸಲಾಗಿದ್ದು, ತಮ್ಮ ವ್ಯಾಪ್ತಿಗೆ ಬಂದ ಸಂದರ್ಭದಲ್ಲಿ ಕಾರ್ಯಕರ್ತರು ಅತ್ಯುತ್ತಮವಾಗಿ ಗೌರವ ಸಲ್ಲಿಸಬೇಕು, ಬೈಕ್ ಜಾಥದ ಮೂಲಕ ಯಾತ್ರೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಮಳವಳ್ಳಿಯಲ್ಲಿ ನಡೆಯಲಿರುವ ಬಹಿರಂಗ ಸಭೆಗೆ ಅತಿ ಹೆಚ್ಚು ಜನ ಸೇರಿಸಲು ಪ್ರತಿಯೊಬ್ಬದು ಜಬಾವ್ದಾರಿ ತೆಗೆದುಕೊಳ್ಳಬೇಕೆಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಶಕ್ತಿ ಏನೆಂದು ತೋರಿಸಿದ್ದೇವೆ, ಜಿಲ್ಲೆಯ ಎಲ್ಲ ಸ್ಥಾನಗಳಲ್ಲಿ ಕಾಂಗ್ರೆಸ್ ನನ್ನು ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು, ಪ್ರತಿಯೊಬ್ಬ ಕಾರ್ಯಕರ್ತನೂ ಮುಖಂಡನ ರೀತಿಯಲ್ಲಿ ಜವಾಬ್ದಾರಿಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಬೇಕು, 2 ತಿಂಗಳು ನನ್ನನ್ನು ಕಾಪಾಡಿ ಗೆಲ್ಲಿಸಿದರೇ ನಿಮ್ಮನ್ನು ಐದು ವರ್ಷಗಳ ತನಕ ನಿಮ್ಮ ನೀರಿಕ್ಷೆ ಹುಸಿ ಭಾರದ ರೀತಿಯಲ್ಲಿ ಸೇವೆ ಮಾಡುತ್ತೇನೆಂದು ಭರವಸೆ ನೀಡಿದರು.

ಕ್ಷೇತ್ರದ ಉಸ್ತುವಾರಿಗಳಾದ ಅಜ್ಜಹಳ್ಳಿ ರಾಮಕೃಷ್ಣ, ಪುಟ್ಟರಾಮು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜೆ.ದೇವರಾಜು, ಎಸ್.ಪಿ.ಸುಂದರ್ ರಾಜ್, ಕಾರ್ಯಾಧ್ಯಕ್ಷ ಎಂ.ಬಿ.ಮಲ್ಲಯ್ಯ, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಟಿಎಪಿಸಿಎಂಎಸ್ ಅಧ್ಯಕ್ಷ ಕೆ.ಎಸ್.ದ್ಯಾಪೇಗೌಡ, ಸದಸ್ಯರಾದ ಎಂ.ಲಿಂಗರಾಜು, ಪ್ರಕಾಶ್, ತಾ.ಪಂ.ಮಾಜಿ ಅಧ್ಯಕ್ಷರಾದ ಆರ್.ಎನ್.ವಿಶ್ವಾಸ್, ಕುಂದೂರು ಪ್ರಕಾಶ್, ಸುಂದರೇಶ್, ಮಾಜಿ ಉಪಾಧ್ಯಕ್ಷ ಸಿ.ಮಾಧು, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ಮುಖಂಡರಾದ ಕುಳ್ಳಚನ್ನಂಕಯ್ಯ, ಪೆಟ್ರೋಲ್ ಬಂಕ್ ಮಹದೇವು, ದಿಲೀಪ್ ಕುಮಾರ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!