Sunday, September 8, 2024

ಪ್ರಾಯೋಗಿಕ ಆವೃತ್ತಿ

ಗಂಧದ ಮರಗಳಿಗೆ ರಕ್ಷಣೆ ಒದಗಿಸಲು ಪೊಲೀಸ್ ಗಸ್ತು: ಮಲ್ಲಿಕಾರ್ಜುನ ಬಾಲದಂಡಿ

ಗಂಧದ ಮರ ಬೆಳೆಸುತ್ತಿರುವ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೇ ಪೊಲೀಸ್ ಗಸ್ತು ನಡೆಸುವಂತೆ ಸೂಚನೆ ನೀಡಲಾಗುವುದು,ಗದ್ದೆ ಬಯಲಿಯಲ್ಲಿ ಮದ್ಯ ಸೇವನೆ ಮಾಡುವವರ ಬಗ್ಗೆ ಗಮನ ಹರಿಸಲಾಗುವುದೆಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೌಡಿ ಶೀಟರ್‌ಗಳು ಕಳೆದ 15-20 ವರ್ಷಗಳಿಂದ ಯಾವುದೇ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗದೇ ನೆಮ್ಮದಿ ಜೀವನ ನಡೆಸುತ್ತಿರುವವರು ರೌಡಿಶೀಟರ್ ತೆಗೆದುಹಾಕುವಂತೆ ಮನವಿ ನೀಡಿದರೇ ಪರಿಶೀಲನೆ ನಡೆಸಿ ಆಗತ್ಯ ಕ್ರಮ ವಹಿಸಲಾಗುವುದು, ಗಂಧದ ಮರ ಬೆಳೆಸುತ್ತಿರುವ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೇ ಪೊಲೀಸ್ ಗಸ್ತು ನಡೆಸುವಂತೆ ಸೂಚನೆ ನೀಡಲಾಗುವುದು, ಗದ್ದೆ ಬಯಲಿಯಲ್ಲಿ ಮದ್ಯ ಸೇವನೆ ಮಾಡುವವರ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಸಮಸ್ಯೆ ಪರಿಹರಿಸಲು ಶ್ರಮಿಸುತ್ತೇನೆ

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹೊಸದಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ತಾಲ್ಲೂಕಿನ ಸಮಸ್ಯೆಗಳು ಹಾಗೂ ನನ್ನಿಂದ ಬದಲಾವಣೆ ಏನು ಮಾಡಬಹುದು ಎನ್ನುವುದನ್ನು ತಿಳಿಯುವ ಉದ್ದೇಶದಿಂದ ಜನಸಂಪರ್ಕ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಅನುಭವ ಹೊಂದಿರುವ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸುತ್ತೇನೆಂದು ಹೇಳಿದರು.

ಪಟ್ಟಣದ ಅನಂತ್‌ರಾಂ ವೃತ್ತದಲ್ಲಿರುವ ಸಿಗ್ನಲ್ ಲೈಟ್ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಸರಿಪಡಿಸುವ ಪ್ರಯತ್ನ ಮಾಡಲಾಗುವುದು, ಜೊತಗೆ ಅಪರಾಧ ಪತ್ತೆ ಕಾರ್ಯಗಳಿಗೆ ಸಹಾಯವಾಗುವಂತೆ ಸಿ.ಸಿ ಕ್ಯಾಮರಗಳನ್ನು ಅಳವಡಿಸಲು ಪೊಲೀಸ್ ಇಲಾಖೆ, ಪುರಸಭೆ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಮುಂದಾಗುತ್ತೇವೆಂದು ಭರವಸೆ ನೀಡಿದರು.

ಪೆಟ್ರೋಲಿಂಗ್ ವ್ಯವಸ್ಥೆ

ಮಳವಳ್ಳಿ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಸುತ್ತಮುತ್ತಲ ಪರಿಸರವನ್ನು ಪರಿಶೀಲನೆ ನಡೆಸಲಾಗುವುದು, ತಾಲ್ಲೂಕಿನ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶಗಳಲ್ಲಿ ಹುಡುಗಿಯರನ್ನು ಚುಡಾಯಿಸುವುದು, ವ್ಹೀಲಿಂಗ್ ಸೇರಿದಂತೆ ಅಪರಾಧಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೆಟ್ರೋಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದರು

ಪೊಲೀಸ್ ಹಾಗೂ ಅಬಕಾರಿ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗುವುದು, ಬೆಳಕವಾಡಿಯಲ್ಲಿ ರಾಷ್ಟ್ರೀಯ ಯ ಹೆದ್ದಾರಿಯಲ್ಲಿರುವ ಪೊಲೀಸ್ ಇಲಾಖೆಗೆ ಸೇರಿದ ಆಸ್ತಿಯಲ್ಲಿ ಸಂಚಾರಿ ಪೊಲೀಸ್ ಠಾಣೆ ನಿರ್ಮಾಣ ಮಾಡುವ ಸಂಬಂಧ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವುದರ ಮೂಲಕ ಪೊಲೀಸ್ ಇಲಾಖೆ ಸಾರ್ವಜನಿಕರ ಜೊತೆಗೆ ಇದೆ ಎನ್ನುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ಮುಂದಾಗುತ್ತೇವೆ, ಪೊಲೀಸ್ ಇಲಾಖೆಗೆ ಸಂಬಂಧಿಸಿದ ಯಾವುದೇ ವಿಷಯ ಇದ್ದರೂ ಕೂಡ ದೂರವಾಣಿಯ ಮೂಲಕ ತಿಳಿಸಿದರೇ ತಕ್ಷಣದಲ್ಲಿಯೇ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಟ್ರಾಫೀಕ್ ಸಮಸ್ಯೆ ನಿವಾರಿಸಬೇಕು, ಅಕ್ರಮ ಮದ್ಯಮಾರಾಟ ತಡೆಯಬೇಕು, ವ್ಹೀಲಿಂಗ್ ಹಾಗೂ ಹೆಚ್ಚಾಗಿ ಸೌಂಡ್ ಮಾಡುತ್ತಾ ಬೈಕ್ ಹೊಡಿಸುವವರ ವಿರುದ್ದ ಕ್ರಮ ಕೈಗೊಳ್ಳಬೇಕು, ಅತಿಯಾದ ಕಳ್ಳತನವಾಗುತ್ತಿರುವುದನ್ನು ತಡೆಯಬೇಕು, ಅಕ್ರಮ ಚಟುವಟಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು, ಮರಳು,ಮಣ್ಣು, ಕಲ್ಲು ಮಾಫೀಯ ತಡೆಯಬೇಕು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ಹಲವು ವಿಷಯಗಳನ್ನು ಸಾರ್ವಜನಿಕರು ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು. ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಸಭೆಯಲ್ಲಿ ಅಪಾರ ಪೊಲೀಸ್ ವರಿಷ್ಠಾಧಿಕಾರಿ ಎಸ್.ಇ ಗಂಗಾಧರ್‌ಸ್ವಾಮಿ, ಡಿವೈಎಸ್‌ಪಿ ಕೃಷ್ಣಪ್ಪ, ಸರ್ಕಲ್ ಇನ್ಸ್ಪೇಕ್ಟರ್ ಬಿ.ಎಸ್ ಶ್ರೀಧರ್, ಮಹೇಶ್, ರವಿಕುಮಾರ್ ಹಾಗೂ ಠಾಣಾ ಪಿ.ಎಸ್.ಐಗಳು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!