Monday, May 20, 2024

ಪ್ರಾಯೋಗಿಕ ಆವೃತ್ತಿ

ಮತಗಟ್ಟೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ನಿರ್ವಹಿಸಿ: ಡಾ.ಲೋಕೇಶ್

ಮುಂಬರುವ ಮಂಡ್ಯ ಲೋಕಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ವಾಗಿ ನಡೆಸಲು ಮತಗಟ್ಟೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ಡಾ.ಲೋಕೇಶ್ ತಿಳಿಸಿದರು.

ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಕೃಷ್ಣರಾಜಪೇಟೆ ತಾಲೂಕಿನ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕೆ.ಆರ್.ಪೇಟೆ ವಿಧಾನಸಭ ವ್ಯಾಪ್ತಿಯಲ್ಲಿ 261 ಮತಗಟ್ಟೆಗಳಿದ್ದು ಎಲ್ಲಾ ಮತಗಟ್ಟೆಗಳಿಗೂ ಖುದ್ದಾಗಿ
ಭೇಟಿ ನೀಡಿ ವಿದ್ಯುತ್, ಕುಡಿಯುವ ನೀರು ಸೇರಿದಂತೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗಿದೆ. ಆಯಾ ಮತಗಟ್ಟೆಗಳ ವ್ಯಾಪ್ತಿಯ ಬಿಎಲ್‌ಓ’ಗಳ ಮೂಲಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು ಒಬ್ಬನೇ ಒಬ್ಬ ಮತದಾರನ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರ ವಹಿಸಲಾಗಿದೆ. 18 ವರ್ಷ ತುಂಬಿರುವ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿರುವ ಹೊಸ
ಮತದಾರರ ಬಗ್ಗೆ ನಿಗಾವಹಿಸಲಾಗಿದ್ದು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಲು ತೊಂದರೆಯಿರುವ ಹಿರಿಯ ನಾಗರೀಕರನ್ನು ಗುರುತಿಸಿ ಅವರವರ ಮನೆಯಲ್ಲಿಯೇ ಮತದಾನ ಮಾಡಿಸಿಕೊಳ್ಳಲು ಎಲ್ಲಾ ರೀತಿಯ ಸಿದ್ಧತೆಗಳನ್ನುಕೈಗೊಳ್ಳಲಾಗಿದೆ ಎಂದರು.

ಮುಕ್ತ ನ್ಯಾಯಸಮ್ಮತವಾದ ಚುನಾವಣೆಗಳನ್ನು ನಡೆಸಲು ಚುನಾವಣಾಧಿಕಾರಿಗಳಾದ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಸಹಾಯಕ ಚುನಾವಣಾಧಿಕಾರಿ ಚಂದ್ರಪ್ಪ ಅವರ ನಿರ್ದೇಶನದಂತೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ತಾಲೂಕಿನ ಗಡಿಪ್ರದೇಶಗಳಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಗಳಲ್ಲಿ ಕಣ್ಗಾವಲನ್ನು ಚುರುಕುಗೊಳಿಸಲಾಗಿದೆ. ಅಕ್ರಮವಾಗಿ ಹಣ, ಮಧ್ಯ ಸೇರಿದಂತೆ ಯಾವುದೇ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ನಡೆಸದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಸಿಡಿಪಿಓ ಅರುಣ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಂ, ಚುನಾವಣಾ ಶಾಖೆಯ ಶಿರಸ್ತೇದಾರ್ ಹರೀಶ್, ರಾಜಶ್ವನಿರೀಕ್ಷಕರಾದ
ಚಂದ್ರಕಲಾ, ಜ್ಞಾನೇಶ್, ಗ್ರಾಮ ಆಡಳಿತ ಅಧಿಕಾರಿಗಳಾದ ಜಗದೀಶ್, ಹರೀಶ್, ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಮತ್ತಿತರರು ಚುನಾವಣಾ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!