Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಅ.28ಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 28 ರಂದು ಜಿಲ್ಲೆಯಲ್ಲಿ ಸುವರ್ಣ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಕ್ಟೋಬರ್ 28 ರಂದು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ತಿಳಿಸಿದರು.

ಪರಿಸರ ಸಂರಕ್ಷಣೆಯ ಕುರಿತಾಗಿ ಜಾಗೃತಿ ಮೂಡಿಸುವುದು ಸಹ ಶೈಕ್ಷಣಿಕ ಕಾರ್ಯಚಟುವಟಿಕೆಯಾಗಿದೆ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ 24 ರಂದು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು ಹಾಗೂ ಜಾಗೃತಿ ಜಾಥಾ ನಡೆಸಲಾಗುವುದು, ಜಿಲ್ಲೆಯಲ್ಲಿ ಅ. 27 ರಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು ಹಾಗೂ ಜಾಗೃತಿ ಜಾಥಾ ನಡೆಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ, ಬಂದೋಬಸ್ತ್ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ, ಅಕ್ಟೋಬರ್ 28 ರಂದು ನಗರದ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಸುವರ್ಣ ಮಹೋತ್ಸವದ ಅಂಗವಾಗಿ ಪ್ರಬಂಧ ಸ್ಪರ್ಧೆ ( ವಿಷಯ: “ಪರಿಸರ ನೈರ್ಮಲ್ಯತೆ ಹಾಗೂ ಆರೋಗ್ಯ”, “ಹಸಿರಿನಿಂದ ಹುಸಿರು”, “ವರ್ತೂಲ ಆರ್ಥಿಕತೆ”, “ಸುಸ್ಥಿರ ಅಭಿವೃದ್ಧಿ” ) ನೀಡಲಾಗುವುದು, ಚರ್ಚಾಸ್ಪರ್ಧೆ, ಆಶು ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಗಳನ್ನು ಆಯೋಜನೆ ಮಾಡಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದರು.

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಾಡುವ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯ ಪ್ರತಿ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹ ಮೂರ್ತಿ, ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾಶಿವಲಿಂಗಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ವಿಶ್ವನಾಥ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಪ್ರತೀಕ್, ನಗರಸಭೆ ಪೌರಾಯುಕ್ತೆ ಪಂಪಶ್ರೀ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚಲುವಯ್ಯ, ನಗರಸಭೆ ಪೌರಾಯುಕ್ತೆ ಪಂಪಶ್ರೀ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ