ಜನತೆ ಏರುತ್ತಿರುವ ಜನಸಂಖ್ಯೆಗೆ ಕಡಿವಾಣ ಹಾಕಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್ ಕೆ ವೆಂಕಟೇಶ್ ಹೇಳಿದರು.
ಶ್ರೀರಂಗಪಟ್ಟಣ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಆವರಣದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಏರುತ್ತಿರುವ ಜನಸಂಖ್ಯೆಯಿಂದ ದೇಶದ ಅಭಿವೃದ್ಧಿ ಕುಂಠಿತ ಆಗುತ್ತದೆ.ದೇಶದ ಹಲವು ಸಮಸ್ಯೆಗಳಿಗೆ ಜನಸಂಖ್ಯೆ ಕಾರಣ.
ಆದ್ದರಿಂದ ಕುಟುಂಬ ಕಲ್ಯಾಣ ಯೋಜನೆಗಳನ್ನು ಅನುಸರಿಸುವ ಮೂಲಕ ಜನಸಂಖ್ಯೆ ನಿಯಂತ್ರಿಸಿ ಎಲ್ಲರೂ ಚಿಕ್ಕ ಕುಟುಂಬ ಹೊಂದಬೇಕು ಎಂದರು.
ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಪುರುಷರು ಮುಂದೆ ಬರಬೇಕು. ಜಾಗೃತಿ ವಾಹನವು ವಿವಿಧ ಗ್ರಾಮಗಳಿಗೆ ತೆರಳಿ ವಿವಿಧ ಜಾಗತಿಕ ಸಂದೇಶ ಫಲಕಗಳ, ಜಾಗೃತಿ ಗೀತೆಗಳ ಮೂಲಕ, ಕರಪತ್ರ ವಿತರಿಸುತ್ತ ಸಾರ್ವಜನಿಕರಿಗೆ ಜನಸಂಖ್ಯೆ ನಿಯಂತ್ರಣ ಕುರಿತು ಅರಿವು ಮೂಡಿಸುತ್ತಿದೆ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜು, ಕೆಂಪೇಗೌಡ, ಹೇಮಣ್ಣ ಹಾಗೂ ಸಾರ್ವಜನಿಕರು ಹಾಜರಿದ್ದರು.