Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮೂರನೇ ದಿನಕ್ಕೆ ಗ್ರಾಮೀಣ ಅಂಚೆ ನೌಕರರ ಮುಷ್ಕರ

ಗ್ರಾಚ್ಯುಯಿಟಿ ಮೇಲಿನ ಗರಿಷ್ಠ ಮೊತ್ತದ ಮಿತಿಯನ್ನು 1.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕು. ವೈದ್ಯಕೀಯ
ಗ್ರಾಚ್ಯುಟಿ ಮೇಲಿನ ಗರಿಷ್ಠ ಮೊತ್ತದ ಮಿತಿಯನ್ನು 1.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕು ಹಾಗೂ ಕಮಲೇಶ ಚಂದ್ರ ಸಮಿತಿ ವರದಿಯನ್ನು ಸಂಪೂರ್ಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಂಡ್ಯನಗರದಲ್ಲಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮಂಡ್ಯನಗರದ ಕೇಂದ್ರ ಅಂಚೆ ಕಚೇರಿ ಎದುರು ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಹಾಗೂ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ಆಶ್ರಯದಲ್ಲಿ ಗ್ರಾಮೀಣ ಅಂಚೆ ನೌಕರರು ಮುಷ್ಕರವನ್ನು ಗುರುವಾರವು ಮುಂದುವರಿಸಿದರು.

ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. 30 ದಿನ ವೇತನ ಸಹಿತ ರಜೆ ನೀಡಬೇಕು. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 180 ದಿನಗಳವರೆಗೆ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಗುಂಪು ವಿಮೆ ಮೊತ್ತವನ್ನು 5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶದ ಜನರಿಗೆ ಸೇವೆ ಒದಗಿಸುವ ಕಾರ್ಯವನ್ನು ಅಂಚೆ ನೌಕರರು ಮಾಡುತ್ತಿದ್ದು, ಕೇಂದ್ರ ಸರ್ಕಾರ ಸವಲತ್ತು ಕಲ್ಪಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ನೌಕರರು, ಗ್ರಾಮೀಣ ಅಂಚೆ ನೌಕರರಿಗೆ ಪ್ರತಿನಿತ್ಯ ಎಂಟು ಗಂಟೆಗಳ ಕಾಲ ಕೆಲಸ ನೀಡಬೇಕು. ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ಸೇವಾ ಹಿರಿತನ ಆಧಾರದ ಮೇಲೆ ಜಿಡಿಎಸ್ ನೌಕರರಿಗೆ ವಿಶೇಷ ಇನ್‌ಕ್ರಿಮೆಂಟ್ ನೀಡಬೇಕು ಎಂದು ಒತ್ತಾಯಿಸಿದರು.

ಮುಷ್ಕರದಲ್ಲಿ ಗ್ರಾಮೀಣ ಅಂಚೆ ನೌಕರರಾದ ಎಸ್ ಕೆ ಸತೀಶ್ ಚಂದ್ರ, ಶ್ರೀನಿವಾಸ್, ಎಂ ಕೆ ಶಿವಲಿಂಗಯ್ಯ,ಎಸ್. ರಮೇಶ್, ಎ.ಆರ್ ಹರೀಶ್,ಎನ್, ಜೆ ಹರಿಣಿ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ