Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜು.4 ರಂದು ಪೋದರ್ ಇಂಟರ್ ನ್ಯಾಷನಲ್ ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಮಂಡ್ಯ ತಾಲ್ಲೂಕಿನ ಹೆಚ್.ಮಲ್ಲಿಗೆರೆ ಬಳಿ ಇರುವ ಪೋದಾರ್ ಇಂಟರ್ ನ್ಯಾಷನಲ್ ಶಾಲೆಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಸುಮಾರು 24 ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ(ಟಿಸಿ) ಹಾಗೂ ಅಂಕಪಟ್ಟಿ ನೀಡದೇ ತೊಂದರೆ ನೀಡುತ್ತಿದೆ ಎಂದು ದೂರಿರುವ ಪೋಷಕರು, ಜು.4 ರಂದು ಬೆಳಿಗ್ಗೆ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸುವ ನಿರ್ಧಾರಕ್ಕೆ ಬಂದಿದ್ಧಾರೆ.

ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ(ಟಿಸಿ) ಹಾಗೂ ಅಂಕಪಟ್ಟಿ ನೀಡದ ಹಿನ್ನೆಲೆಯಲ್ಲಿ ಜು.೪(ಶುಕ್ರವಾರ) ಶಾಲೆಯ ಮುಖ್ಯದ್ವಾರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಯ ಪೋಷಕರಾದ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಉಮೇಶ್ ಸಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋದರ್ ಶಾಲೆಯಲ್ಲಿ ವ್ಯಾಸಂಗ ಮಾಡಿದ ಎಲ್ಲ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶ ಹೊರಬಂದು ಎರಡು ತಿಂಗಳು ಕಳೆದರೂ ಇನ್ನೂ ಅಂಕಪಟ್ಟಿ ಹಾಗೂ ವರ್ಗಾವಣೆ ಪ್ರಮಾಣ ಪತ್ರಗಳನ್ನು ನೀಡಿಲ್ಲ, ಈಗಾಗಲೇ ಪ್ರಥಮ ಪಿಯುಸಿ ತರಗತಿಗಳು ಆರಂಭವಾಗಿ ಒಂದು ತಿಂಗಳು ಕಳೆಯುತ್ತಾ ಬಂದಿವೆ. ಕಾಲೇಜಿಗೆ ಮಕ್ಕಳನ್ನು ದಾಖಲು ಮಾಡಿರುವ ಪೋಷಕರು ಟಿಸಿ ಹಾಗೂ ಅಂಕಪಟ್ಟಿಗಾಗಿ ಪೋದಾರ್ ಶಾಲೆಗೆ ಅಲೆದಾಡಿದರೂ ದಾಖಲಾತಿಗಳನ್ನು ನೀಡಿಲ್ಲ ಎಂದು ಉಮೇಶ್ ದೂರಿದ್ದಾರೆ.

ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ಅವರಿಗೆ ಕಳೆದ ಜೂ.13ರಂದು ಹಾಗೂ ಜಿಲ್ಲಾಧಿಕಾರಿಗಳಿಗೆ ಜೂ.25ರಂದು ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಬೇಸತ್ತು ಪೋದಾರ್ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ. ಜು.4ರಂದು ಬೆಳಿಗ್ಗೆ 9 ಗಂಟೆಗೆ ಶಾಲೆಯ ಮುಖ್ಯದ್ವಾರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ಧಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ