ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ನವೆಂಬರ್ 25ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮಂಡ್ಯನಗರ ಪ್ರದೇಶಗಳಾದ ಸುಭಾಷ್ನಗರ, ಆಶೋಕ ನಗರ, ವಿ.ವಿ.ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರಡಿ ರೋಡ್, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, ಎನ್.ಸಿ.ಓ ಲೇಔಟ್ ಶ್ರೀ ರಾಮನಗರ, ಕಾವೇರಿ ನಗರ 1 ಮತ್ತು 2 ನೇ ಹಂತ, ಚಂದ್ರದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯ ಉಂಟಾಗಲಿದೆ.
ಮಂಡ್ಯ ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚಣೆವುಂಟಾಗುತ್ತದೆ ಎಂದು ಸೆಸ್ಕ್, ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




