ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಸೆಸ್ಕಾಂ ಇಲಾಖೆ ಪ್ರಕಟಣೆ ತಿಳಿಸಿದೆ.
ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ನಗರ ಪ್ರದೇಶಗಳಾದ ಶಂಕರಪುರ , ಜೈನರ ಬೀದಿ,ಬೀಡಿ ಕಾಲೋನಿ, ಜಬ್ಬಾರ್ ಸರ್ಕಲ್,ವಿವೇಕಾನಂದ ಬಡಾವಣೆ ಕೆರೆಯಂಗಳ,ಗ್ರಾಮಾಂತರ ಪ್ರದೇಶಗಳಾದ ಗೋಪಾಲಪುರ, ಚಿಕ್ಕಮಂಡ್ಯ,ಸಾತನೂರು, ಕೊಮ್ಮೇರಹಳ್ಳಿ,ಹುಲಿವಾನ, ಕೆ.ಗೌಡಗೆರೆ. ಹೆಚ್.ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ,ಹೆಚ್. ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳಿಸಲಾಗುತ್ತದೆ ಎಂದು ಮಂಡ್ಯ ಸೆಸ್ಕ್ ಮತ್ತು ಕಾ ಮತ್ತು ಪಾ ವಿಭಾಗದ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.