Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ನ ”ಪ್ರಜಾಧ್ವನಿ” ಬಸ್ ಯಾತ್ರೆ ಬೆಳಗಾವಿಯಿಂದ ಶುರು

ನವ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ “ಪ್ರಜಾಧ್ವನಿ” ಬಸ್ ಯಾತ್ರೆಗೆ ಬೆಳಗಾವಿಯ ವೀರಸೌಧದಲ್ಲಿ ಇಂದು ಚಾಲನೆ ನೀಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಗೌರವ ನಮನ ಅರ್ಪಿಸಲಾಯಿತು.

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತವನ್ನು ಕೊನೆಗಾಣಿಸಿ, ಜನಪರವಾದ, ಅಭಿವೃದ್ಧಿಪರವಾದ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೆ ನಮ್ಮ ಪ್ರಜಾಧ್ವನಿ ಯಾತ್ರೆ ಮುನ್ನುಡಿಯಾಗಲಿದೆ. ಬನ್ನಿ, ಭಾಗವಹಿಸಿ ಕರುನಾಡಿಗಾಗಿ ಕೈಜೋಡಿಸಿ ಎಂದು ಕಾಂಗ್ರೆಸ್ ನಾಯಕರು ಮನವಿ ಮಾಡಿದರು.

ನವ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಹಮ್ಮಿಕೊಂಡಿರುವ ‘ಪ್ರಜಾ ಧ್ವನಿ’ ಬಸ್ ಯಾತ್ರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಬೆಳಗಾವಿಯ ವೀರಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಬಿ ಕೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!