Sunday, May 5, 2024

ಪ್ರಾಯೋಗಿಕ ಆವೃತ್ತಿ

ಸಕ್ಕರೆ ನಾಡಿನಲ್ಲಿ ‘ಪ್ರಜಾಧ್ವನಿ’ ಮೊಳಗಿಸಲು ಕಾಂಗ್ರೆಸ್ ಸಜ್ಜು

ಸಕ್ಕರೆ ನಾಡು ಮಂಡ್ಯದಲ್ಲಿ ‘ಪ್ರಜಾಧ್ವನಿ’ ಮೊಳಗಿಸಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ಬೃಹತ್ ವೇದಿಕೆಯಲ್ಲಿ ಶುಕ್ರವಾರ(ಜ.27) ನಡೆಯಲಿರುವ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ’ ಸಮಾವೇಶವನ್ನು ಬಲಾಬಲ ಪ್ರದರ್ಶನದ ವೇದಿಕೆಯಾಗಿಸಲು ಕಾಂಗ್ರೆಸ್ ನಿರ್ಧರಿಸಿದೆ.

nudikarnataka.com
ಜಾಹೀರಾತು

ಕೆಪಿಸಿಸಿ ಉಪಾಧ್ಯಕ್ಷರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ‘ಪ್ರಜಾಧ್ವನಿ’ ಸಮಾವೇಶದ ಮುಖಾಂತರ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಕಾಂಗ್ರೆಸ್ ಶಕ್ತಿಯ ಸಂದೇಶ ನೀಡಲು ಜಿಲ್ಲಾ ಕಾಂಗ್ರೆಸ್ ನಾಯಕರು ಶ್ರಮಿಸುತ್ತಿದ್ದಾರೆ. ಮತದಾರರ ಮನಮುಟ್ಟಲು ಕಾಂಗ್ರೆಸ್ ಪಕ್ಷಕ್ಕೆ ‘ಪ್ರಜಾಧ್ವನಿ’ ಸಮಾವೇಶ ಮುನ್ನುಡಿಯಾಗಲಿದೆ ಹಾಗೂ ಮುಂಬರುವ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದರಿತಿರುವ ಕಾಂಗ್ರೆಸ್ ನಾಯಕರು ಪ್ರಜಾಧ್ವನಿ ಯಶಸ್ಸಿಗೆ ಟೊಂಕಕಟ್ಟಿ ನಿಂತಿದ್ದಾರೆ.

ಭಾರತ್ ಜೋಡೋ ಯಶಸ್ಸಿನ ನಂತರ ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ ಕಾಂಗ್ರೆಸ್ ‘ಪ್ರಜಾಧ್ವನಿ’ ಮೂಲಕ ಜೆಡಿಎಸ್, ಬಿಜೆಪಿಗೆ ಎದುರೇಟು ನೀಡಲು ಕೈ ಪಡೆ ಸಕಲ ಸಿದ್ಧತೆ ನಡೆಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿ ನಾಯಕರು ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಲಿದ್ದಾರೆ.

nudikarnataka.com
ಜಾಹೀರಾತು

ಬೃಹತ್ ವೇದಿಕೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಬೆಳಗ್ಗೆ 11ಗಂಟೆಗೆ ಸಮಾವೇಶಕ್ಕೆ ಚಾಲನೆ ಸಿಗಲಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮೊದಲ ಬೃಹತ್ ಸಮಾವೇಶವಾದ ‘ಪ್ರಜಾಧ್ವನಿ’ ಹೆಚ್ಚು ಮಹತ್ವ ಪಡೆದುಕೊಂಡಿದೆ. ಕೆಪಿಸಿಸಿ ಉಪಾಧ್ಯಕ್ಷರಾದ ಎನ್.ಚಲುವರಾಯಸ್ವಾಮಿ ಮತ್ತು ಪಿ.ಎಂ.ನರೇಂದ್ರಸ್ವಾಮಿ ಅವರು ಜಿಲ್ಲೆಯವರೇ ಆಗಿರುವುದರಿಂದ ಸಮಾವೇಶ ಯಶಸ್ವಿಗೊಳಿಸಬೇಕಿದೆ. ಇದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತೆಯೇ ಇಬ್ಬರು ನಾಯಕರ ನೇತೃತ್ವದಲ್ಲಿ ರೂಪುರೇಷೆ ಸಿದ್ಧಪಡಿಸಿಕೊಳ್ಳಲಾಗಿದೆ. ಮಾತ್ರವಲ್ಲದೆ ಪ್ರತಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಹಾಗೂ
ಮುಖಂಡರಿಗೆ ಕಾರ್ಯಕರ್ತರನ್ನು ಹಾಗೂ ಜನರನ್ನು ಕರೆತರುವ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಏಳು ಜಿಲ್ಲೆಗಳಿಂದ ನಾಯಕರು ಸಾವಿರಾರು ಬಸ್ ಗಳಲ್ಲಿ ಜನರನ್ನು ಕರೆತರಲು ಮುಂದಾಗಿದ್ದಾರೆ. ಈಗಾಗಲೇ ಏಳು ತಾಲೂಕಿನಲ್ಲಿ ಪೂರ್ವಭಾವಿ ಸಭೆಗಳನ್ನು ಮಾಡಲಾಗಿದೆ.

nudikarnataka.com
ಪ್ರಜಾಧ್ವನಿ ಸಮಾವೇಶದ ಸಿದ್ಧತೆ ವೀಕ್ಷಿಸಿದ ಚಲುವರಾಯಸ್ವಾಮಿ ಮತ್ತಿತರರು.

ಫ್ಲೆಕ್ಸ್ ಆರ್ಭಟ

ನಗರದ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಗಳು ವರಿಷ್ಠರ ಗಮನ ಸೆಳೆಯಲು ಪೈಪೋಟಿಗೆ ಬಿದ್ದವರಂತೆ ಫ್ಲೆಕ್ಸ್‌ಗಳನ್ನು ಹಾಕಿಸಿದ್ದಾರೆ. ಅದರಲ್ಲೂ ಮಂಡ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಫ್ಲೆಕ್ಸ್ ಗಳ ಆರ್ಭಟ ಹೆಚ್ಚಾಗಿದೆ. ಅಲ್ಲದೇ ಟಿಕೆಟ್ ಆಕಾಂಕ್ಷಿಗಳು ಪ್ಲೇಕ್ಸ್ ಗಳನ್ನು ಹಾಕಿಸುವ ಮೂಲಕ ತಮ್ಮ ಪಕ್ಷದ ನಾಯಕರನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ.

nudikarnataka.com
ಜಾಹೀರಾತು

 ಶಕ್ತಿ ಪ್ರದರ್ಶನ

ಅಲ್ಲದೇ ಕಾಂಗ್ರೆಸ್ ನಾಯಕರ ಮುಂದೆ ಶಕ್ತಿ ಪ್ರದರ್ಶನಕ್ಕೆ ತಮ್ಮ ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ  ಪೂರ್ವಭಾವಿ ಸಭೆಗಳನ್ನು ನಡೆಸಿರುವ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರನ್ನು ಕೆರೆ ತರಲು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕರೇ ಹೇಳುವಂತೆ ಒಂದು ಲಕ್ಷ ಜನರು ಪ್ರಜಾಧ್ವನಿಯಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ. ಒಟ್ಟಾರೆಯಾಗಿ ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಗೆಲುವು ಕಂಡಿರುವ ಕಾಂಗ್ರೆಸ್ ಪಕ್ಷವು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಹಳೆ ಮೊಳಗಿಸುವ ಉದ್ದೇಶದಿಂದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕೆಲಸದಲ್ಲಿ ನಿರತವಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!