ದೇಶಾದ್ಯಂತ ಸಂಚಲನ ಮೂಡಿಸಿದ್ದ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಕೇಸು ರಾಜಕೀಯ ಮಟ್ಟದಲ್ಲಿ ರಾಜಿ ಆಗಿದೆಯೇ ಎನ್ನುವ ಚರ್ಚೆಯಾಗುತ್ತಿದೆ.
ದಿನ ಬೆಳಗಾದರೆ ಕಾಂಗ್ರೆಸ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ವಾಗ್ದಾಳಿ ಮಾಡುತ್ತಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ದಿಢೀರ್ ಪತ್ರಿಕಾಗೋಷ್ಠಿ ನಡೆಸಿ ಎಲ್ಲಿದ್ದರೂ ಇಪ್ಪತ್ತನಾಲ್ಕು ಗಂಟೆಯಲ್ಲಿ ಬಂದು ಎಸ್ಐಟಿ ಮುಂದೆ ಹಾಜರಾಗು ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ.
ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಪೆನ್ ಡ್ರೈವ್ ವಿಚಾರದಲ್ಲಿ ಯಾವುದೇ ಸಚಿವರು ಹೇಳಿಕೆ ನಿಡದಂತೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹಾಗಾಗಿ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕಾನೂನು ತನ್ನ ಪ್ರಕ್ರಿಯೆ ಮುಂದುವರೆಸಲಿದ್ದು,ಆದರೆ ರಾಜಕೀಯವಾಗಿ ಎರಡು ಬಣಗಳು ಯುದ್ದ ನಿಲ್ಲಿಸಿದ್ದಾರೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.




