Wednesday, May 15, 2024

ಪ್ರಾಯೋಗಿಕ ಆವೃತ್ತಿ

ಪೆನ್ ಡ್ರೈವ್ ಪ್ರಕರಣ| ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಆಗ್ರಹ

ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರು ಪಕ್ಷದ ವರಿಷ್ಠ ಎಚ್.​ಡಿ ದೇವೇಗೌಡರಿಗೆ ಪತ್ರ ಬರೆದಿದ್ದಾರೆ.

“ಹಾಸನ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿವೆ. ಆ ವಿಡಿಯೋಗಳು ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗುತ್ತಿದೆ. ಮೇಲ್ನೋಟಕ್ಕೆ ಪ್ರಜ್ವಲ್ ತಪ್ಪಿತಸ್ಥರು ಎಂಬುದು ಗೊತ್ತಾಗುತ್ತಿದೆ. ಇದರಿಂದ ಮುಜುಗರವಾಗಿದೆ. ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು” ಎಂದು ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದ್ದಾರೆ.

“ದೇವೇಗೌಡರು, ಎಚ್.​ಡಿ ಕುಮಾರಸ್ವಾಮಿ ಅವರು ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತಾ ಬಂದಿದ್ದಾರೆ. ಎಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿದ್ದರು. ಪಕ್ಷದ ಚಿಹ್ನೆಯಲ್ಲಿ ಭತ್ತದ ಹೊರೆಹೊತ್ತ ಮಹಿಳೆಯ ಚಿತ್ರ ಇದೆ. ಅದು ಹೆಣ್ಣಿನ ಗೌರವವನ್ನ ಪ್ರತಿಪಾದಿಸುತ್ತದೆ. ಇಂತಹ ಪರಂಪರೆ ಹೊಂದಿರುವ ಪಕ್ಷಕ್ಕೆ ಮುಜುಗರ ತಂದಿರುವ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!