Tuesday, May 21, 2024

ಪ್ರಾಯೋಗಿಕ ಆವೃತ್ತಿ

ಲೈಂಗಿಕ ಕಿರುಕುಳ ಪ್ರಕರಣ| ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ನೂರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ ಎಂದು ಜೆಡಿಎಸ್ ಹೇಳಿಕೊಂಡಿದೆ.

ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ಎಸ್ಐಟಿ ತನಿಖಾದಳವನ್ನು ರಚಿಸಿದೆ ಎಂದಿರುವ ಜೆಡಿಎಸ್ ಪಕ್ಷವು, ಈ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು Article XXII-Breach of Discipline-4 ರಂತೆ ಪ್ರಜ್ವಲ್ ರೇವಣ್ಣ ಅವರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತ್ತುಗೊಳಿಸಲಾಗಿದೆ ಎಂದ ತನ್ನ ಆದೇಶದಲ್ಲಿ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!